alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ಸಮರಕ್ಕೆ ಬಿಜೆಪಿ ಸಜ್ಜು: ಬಿ.ಎಸ್.ವೈ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ

ಸ್ಥಳೀಯ ಸಂಸ್ಥೆಗಳ ಚುನಾವಣೆ ಜತೆಗೆ ಪ್ರಮುಖವಾಗಿ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂಬ ಪಣ ತೊಟ್ಟಿರುವ ಬಿಜೆಪಿ, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದಿನಿಂದ ರಾಜ್ಯ ಪ್ರವಾಸ ಆರಂಭಿಸಲಿದೆ.

ರಾಜ್ಯ ಪ್ರವಾಸದ ಮೊದಲ ದಿನವಾದ ಇಂದು ಬೀದರ್ ನ ಪ್ರಸಿದ್ಧ ಶ್ರೀ ಪಾಪನಾಶಿನಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಬಿ.ಎಸ್. ಯಡಿಯೂರಪ್ಪನವರು ಹಾಗೂ ಜಿಲ್ಲೆಯ ನಾಯಕರ ನೇತೃತ್ವದಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರವಾಸ ಪ್ರಾರಂಭಿಸಲಾಯಿತು.

ವಿಧಾನಸಭಾ ಚುನಾವಣೆಯಲ್ಲಾದ ತಪ್ಪುಗಳಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ನಾಯಕರು ಮತ್ತೆ ರಾಜ್ಯ ಪ್ರವಾಸ ಮಾಡುವ ಮೂಲಕ ಮತದಾರರ ಓಲೈಕೆಗೆ ಸಜ್ಜಾಗಿದ್ದಾರೆ. ಈ ನಿಟ್ಟಿನಲ್ಲಿ ಬಿ.ಎಸ್. ಯಡಿಯೂರಪ್ಪ ಸಾರಥ್ಯದಲ್ಲಿ ರಾಜ್ಯ ಪ್ರವಾಸ ಆರಂಭವಾಗಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಸಮರ ಸಾರಲು ಮುಂದಾಗಿದ್ದಾರೆ.

ಈ ವೇಳೆ ಸಂಪೂರ್ಣ ಸಾಲಮನ್ನಾ, ಬಜೆಟ್ ನಿಂದ ಆಗಿರುವ​ ಅನ್ಯಾಯ, ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಮೊದಲಾದ ವಿಷಯಗಳ ಕುರಿತು ಜನರಿಗೆ ಮನವರಿಕೆ ಮಾಡಿ, ಅದರ ಲಾಭ ಪಡೆಯಲು ಕಮಲ ಪಡೆ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಬೀದರ್ ನಲ್ಲಿ ಬಿ.ಎಸ್.ವೈ. ನೇತೃತ್ವದಲ್ಲಿ ಇಂದು ಬಿಜೆಪಿ ಮಹತ್ವದ ಸಭೆ ನಡೆದಿದ್ದು, ಚುನಾವಣಾ ಪ್ರಚಾರದ ರೂಪುರೇಷೆ ಕೂಡ ಸಿದ್ಧಪಡಿಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...