alex Certify
ಕನ್ನಡ ದುನಿಯಾ       Mobile App
       

Kannada Duniya

ಏಪ್ರಿಲ್ ಮೊದಲವಾರ ಚುನಾವಣೆ ಘೋಷಣೆ ಸಾಧ್ಯತೆ

ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್ ಮೊದಲ ವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ರಾಜಕೀಯ ಪಕ್ಷಗಳು ಈಗಾಗಲೇ ಚುನಾವಣೆ ತಯಾರಿ ನಡೆಸಿದ್ದು, ಮುಂದಿನ ವಾರ ಚುನಾವಣೆ ಘೋಷಣೆಯಾಗಬಹುದೆಂದು ಹೇಳಲಾಗಿತ್ತು.

ಕೇಂದ್ರ ಚುನಾವಣಾ ಆಯೋಗ ಮೇ 5 ಅಥವಾ 7 ರಂದು ಚುನಾವಣೆ ನಡೆಸಲಿದ್ದು, ಮೇ 8 ಅಥವಾ 10 ರಂದು ಮತ ಎಣಿಕೆಗೆ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿತ್ತು. ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ.

ಚುನಾವಣೆಗೆ ಆಯೋಗ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳು ಮಾರ್ಚ್ 27, 28 ರಂದು ರಾಜ್ಯಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಅಂದರೆ, ಏಪ್ರಿಲ್ ಮೊದಲ ವಾರದಲ್ಲಿ ಚುನಾವಣೆ ದಿನಾಂಕವನ್ನು ಘೋಷಿಸಲಿದ್ದು, ಘೋಷಣೆಯಾದ ಸಮಯದಿಂದ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...