alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳೆಷ್ಟು ಗೊತ್ತಾ…?

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನೆ ಬಳಿಕ ಅನೇಕರ ನಾಮಪತ್ರಗಳು ತಿರಸ್ಕೃತವಾಗಿವೆ. ಇದರೊಂದಿಗೆ ಹಲವರು ನಾಮಪತ್ರ ವಾಪಸ್ ಪಡೆದಿದ್ದಾರೆ. ಅಂತಿಮವಾಗಿ ಕಣದಲ್ಲಿ 2655 ಮಂದಿ ಇದ್ದಾರೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ನಿನ್ನೆ 583 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.

3238 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 271 ನಾಮಪತ್ರಗಳು ತಿರಸ್ಕೃತಗೊಂಡಿವೆ. 583 ಮಂದಿ ವಾಪಸ್ ಪಡೆದಿದ್ದು, 2655 ಮಂದಿ ಕಣದಲ್ಲಿದ್ದಾರೆ. ಅವರಲ್ಲಿ 2436 ಪುರುಷರು, 219 ಮಹಿಳಾ ಅಭ್ಯರ್ಥಿಗಳಾಗಿದ್ದಾರೆ.

ಬಿ.ಜೆ.ಪಿ. ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳು 222 ಕ್ಷೇತ್ರಗಳಲ್ಲಿ ಇದ್ದಾರೆ. ಮೇಲುಕೋಟೆಯಲ್ಲಿ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿಲ್ಲ. ಮುಳಬಾಗಿಲು ಕ್ಷೇತ್ರದಲ್ಲಿ ಕಾರಣಾಂತರದಿಂದ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

ಇನ್ನು ಜೆ.ಡಿ.ಎಸ್. ಪಕ್ಷದ 201 ಅಭ್ಯರ್ಥಿಗಳು, ಬಿ.ಎಸ್.ಪಿ.ಯ 18 ಅಭ್ಯರ್ಥಿಗಳು ಹಾಗೂ 1155 ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...