alex Certify
ಕನ್ನಡ ದುನಿಯಾ       Mobile App
       

Kannada Duniya

ಅಭ್ಯರ್ಥಿಗಳ ಆತಂಕ ಹೆಚ್ಚಿಸಿದ ಟಿಕೆಟ್ ‘ಮಾನದಂಡ’

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕೆ.ಪಿ.ಸಿ.ಸಿ. ಚುನಾವಣಾ ಸಮಿತಿ ಸಭೆಯಲ್ಲಿ ಕಳೆದ ಚುನಾವಣೆಯಲ್ಲಿ ಸೋತ 90 ಕ್ಷೇತ್ರಗಳ ಅಭ್ಯರ್ಥಿಗಳ ಟಿಕೆಟ್ ಹಂಚಿಕೆ ಕುರಿತಾಗಿ ಚರ್ಚೆ ನಡೆಸಲಾಗಿದೆ.

ಈಗಾಗಲೇ ಆಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಿದ್ದು, ತಮಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಕ್ರಿಮಿನಲ್ ಹಿನ್ನಲೆ, ಭ್ರಷ್ಟಾಚಾರ ಆರೋಪ ಹೊತ್ತವರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಲಾಗಿದೆ. ವಯಸ್ಸಿನ ಮಿತಿ ಇಲ್ಲದೇ ಗೆಲ್ಲುವ ಅಭ್ಯರ್ಥಿಗಳಿಗೆ ಮಣೆ ಹಾಕಲು, ಒಂದು ಕುಟುಂಬಕ್ಕೆ 1 ಟಿಕೆಟ್ ನಿಯಮ ಸಡಿಲಿಸಲು ಹಾಗೂ ಕಳೆದ ಚುನಾವಣೆಯಲ್ಲಿ ಠೇವಣಿ ಕಳೆದುಕೊಂಡವರಿಗೆ, ಭಾರೀ ಅಂತರದಿಂದ ಸೋಲು ಕಂಡವರಿಗೆ, ನಿರಂತರವಾಗಿ 3 ಸಲ ಸೋಲು ಕಂಡವರಿಗೆ ಅವಕಾಶ ನೀಡದಿರಲು ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಾಗಲೇ ಅರ್ಜಿ ಸಲ್ಲಿಸಿರುವ ಅನೇಕ ಆಕಾಂಕ್ಷಿಗಳು ಈ ಮಾನದಂಡಗಳಿಂದ ಆತಂಕಗೊಂಡಿದ್ದಾರೆ. ಮಾರ್ಚ್ 23 ರಂದು ರಾಜ್ಯಸಭೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಪಕ್ಷೇತರ ಮತ್ತು ಬಂಡಾಯ ಶಾಸಕರ ಕ್ಷೇತ್ರಗಳ ಅಭ್ಯರ್ಥಿಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಿಲ್ಲ.

ಮಾರ್ಚ್ 26 ರಂದು ಮತ್ತೆ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಕುರಿತು ಹಾಗೂ ಗೆಲುವನ್ನೇ ಮುಖ್ಯ ಮಾನದಂಡವಾಗಿಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...