alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಟಿಕೆಟ್, ನಾಯಕರ ಮಕ್ಕಳಿಗೂ ಸಿಕ್ತು ಚಾನ್ಸ್

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದ್ದು, ನಾಯಕರ ಮಕ್ಕಳಿಗೆ ಅವಕಾಶ ನೀಡಲಾಗಿದೆ. ಕೆಲವರು ಹೊಸಬರಾಗಿದ್ದರೆ, ಉಳಿದವರು ಈಗಾಗಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸಿ.ಎಂ. ಸಿದ್ಧರಾಮಯ್ಯ ಪುತ್ರ ಡಾ. ಯತೀಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯಲ್ಲಿ ಸಚಿವ ಟಿ.ಬಿ.ಜಯಚಂದ್ರ ಪುತ್ರ ಸಂತೋಷ್, ಜಯನಗರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ, ಗೋವಿಂದರಾಜನಗರದಲ್ಲಿ ಸಚಿವ ಎಂ. ಕೃಷ್ಣಪ್ಪ ಪುತ್ರ ಪ್ರಿಯಾಕೃಷ್ಣ, ಜೇವರ್ಗಿಯಲ್ಲಿ ಮಾಜಿ ಸಿ.ಎಂ. ಧರಂಸಿಂಗ್ ಪುತ್ರ ಡಾ. ಅಜಯ್ ಸಿಂಗ್ ಅವರಿಗೆ ಟಿಕೆಟ್ ನೀಡಲಾಗಿದೆ.

ಕಲಬುರಗಿ ಗ್ರಾಮಾಂತರದಿಂದ ಜಿ. ರಾಮಕೃಷ್ಣ ಪುತ್ರ ವಿಜಯ್ ಕುಮಾರ್, ಕೆ.ಜಿ.ಎಫ್.ನಿಂದ ಕೆ.ಹೆಚ್. ಮುನಿಯಪ್ಪ ಪುತ್ರಿ ರೂಪಾ ಶಶಿಧರ್, ಚಿಕ್ಕೋಡಿಯಿಂದ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ, ದಾವಣಗೆರೆಯಿಂದ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...