alex Certify
ಕನ್ನಡ ದುನಿಯಾ       Mobile App
       

Kannada Duniya

ಮಾರ್ಚ್ 23 ರಂದು ವಿಧಾನಸಭೆ ಚುನಾವಣೆಗೆ ಮುಹೂರ್ತ..?

ಬೆಂಗಳೂರು: ವಿಧಾನಸಭೆ ಚುನಾವಣೆಯನ್ನು ಸುಗಮವಾಗಿ ನಡೆಸಲು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿರುವ ಚುನಾವಣಾ ಆಯೋಗ, ಮಾರ್ಚ್ 23 ರಂದು ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ಮೇ 7 ರಿಂದ 13 ರ ನಡುವೆ ಒಂದೇ ಹಂತದಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಆಯೋಗ ಪೂರ್ವ ತಯಾರಿ ಮಾಡಿಕೊಂಡಿದ್ದು, ಮಾರ್ಚ್ 23 ರಂದು ದಿನಾಂಕ ಘೋಷಿಸುವ ನಿರೀಕ್ಷೆ ಇದೆ.

ಕೇಂದ್ರ ಚುನಾವಣಾ ಆಯುಕ್ತರಾದ ಒ.ಪಿ. ರಾವತ್ ರಾಜ್ಯಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡು ನಂತರದಲ್ಲಿ ದಿನಾಂಕ ಘೋಷಿಸಲಿದ್ದಾರೆ. ಮಾರ್ಚ್ 23 ರಂದು ದಿನಾಂಕ ಘೋಷಣೆಯಾದಲ್ಲಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಮೇ ಮೊದಲವಾರ ಇಲ್ಲವೇ, 2 ನೇ ವಾರದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಚುನಾವಣೆ ಕರ್ತವ್ಯದಲ್ಲಿ ಭಾಗಿಯಾಗಲಿರುವ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ನಡೆಸಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...