alex Certify
ಕನ್ನಡ ದುನಿಯಾ       Mobile App
       

Kannada Duniya

ಏ. 15 ರ ವೇಳೆಗೆ ಪ್ರಕಟವಾಗಲಿದೆ ಚುನಾವಣೆ ದಿನಾಂಕ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಏಪ್ರಿಲ್ 15 ರ ವೇಳೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಬೇಗನೆ ಪರೀಕ್ಷೆಗಳು ನಡೆದಿವೆ. ಯಾವಾಗ ಚುನಾವಣೆ ನಡೆಯಲಿದೆ ಎಂಬ ಕುತೂಹಲ ಮೂಡಿದ್ದು, ಇದಕ್ಕೆ ತೆರೆ ಎಳೆದಿರುವ ಚುನಾವಣಾ ಆಯೋಗ ಏಪ್ರಿಲ್ 15 ರ ವೇಳೆಗೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಿದೆ.

ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್ ಸುದ್ದಿ ವಾಹಿನಿಯೊಂದಿಗೆ ಮಾತನಾಡಿ ಈ ಕುರಿತು ಮಾಹಿತಿ ನೀಡಿದ್ದು, ಮಾರ್ಚ್ ಅಂತ್ಯಕ್ಕೆ ಹಾಗೂ ಏಪ್ರಿಲ್ 14 ರ ವೇಳೆಗೆ ವಿವಿಧ ಪರೀಕ್ಷೆಗಳು ಮುಕ್ತಾಯವಾಗಲಿವೆ. ಏಪ್ರಿಲ್ 15 ರ ವೇಳೆಗೆ ಚುನಾವಣೆ ದಿನಾಂಕವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಈಗಾಗಲೇ ಚುನಾವಣೆಗೆ ಇ.ವಿ.ಎಂ.(ವಿದ್ಯುನ್ಮಾನ ಮತಯಂತ್ರಗಳು) ಬಂದಿವೆ. ಎಲ್ಲಾ ಜಿಲ್ಲೆಗಳಿಗೆ ಮತಯಂತ್ರಗಳನ್ನು ರವಾನಿಸಲಾಗುತ್ತಿದೆ. ಅವುಗಳನ್ನು ಪರೀಕ್ಷಿಸಿ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆ ಜೋರಾಗಿದ್ದು, ಈಗಾಗಲೇ ಬಿರುಸಿನ ಪ್ರಚಾರ ನಡೆಸಿವೆ. ಚುನಾವಣಾ ಆಯೋಗ ಕೂಡ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಏಪ್ರಿಲ್ 15 ರ ವೇಳೆಗೆ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...