alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರಿನಲ್ಲಿ 7 ಕೋಟಿ ರೂ. ನಗದು, 3 ಕೋಟಿ ರೂ. ಮೌಲ್ಯದ ಆಭರಣ ಜಪ್ತಿ

ಮೈಸೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಐ.ಟಿ. ಅಧಿಕಾರಿಗಳು ಮುಖ್ಯಮಂತ್ರಿ ಆಪ್ತನ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವ ಹೆಚ್.ಸಿ. ಮಹದೇವಪ್ಪ ಅವರ ಆಪ್ತರಾದ ಕಂಟ್ರಾಕ್ಟರ್ ಮರಿಸ್ವಾಮಿ ಅವರ ಮನೆ ಸೇರಿದಂತೆ 10 ಕಡೆಗಳಲ್ಲಿ ಐ.ಟಿ. ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ದಾಳಿಯ ಸಂದರ್ಭದಲ್ಲಿ ಬರೋಬ್ಬರಿ 7 ಕೋಟಿ ರೂ. ನಗದು, 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ.

ಇಷ್ಟೊಂದು ಹಣವನ್ನು ಮನೆಯಲ್ಲಿಟ್ಟಿದ್ದು ಏಕೆ? ಚುನಾವಣೆಗೆ ಬಳಸಲು ಈ ಹಣವನ್ನು ಸಂಗ್ರಹಿಸಲಾಗಿತ್ತೆ? ಎಂಬುದರ ಕುರಿತಾಗಿಯೂ ತನಿಖೆ ನಡೆಸಲಾಗಿದೆ.

ಕಳೆದ ತಿಂಗಳಿಂದಲೇ ಐ.ಟಿ. ಇಲಾಖೆ ಗುತ್ತಿಗೆದಾರರ ಮೇಲೆ ಕಣ್ಣಿಟ್ಟಿದ್ದು, ಗುತ್ತಿಗೆದಾರರಿಗೆ ಇತ್ತೀಚೆಗೆ ಬಿಡುಗಡೆ ಮಾಡಲಾದ ಹಣದ ಮಾಹಿತಿ ಕೇಳಿ ಸರ್ಕಾರಕ್ಕೆ ಪತ್ರ ಬರೆದಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...