alex Certify
ಕನ್ನಡ ದುನಿಯಾ       Mobile App
       

Kannada Duniya

4 ದಿನ ಮದ್ಯ ಮಾರಾಟಕ್ಕೆ ಬ್ರೇಕ್

ವಿಧಾನಸಭೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಮುಂದಾಗಿರುವ ಚುನಾವಣಾ ಆಯೋಗ, ಅಬಕಾರಿ ಇಲಾಖೆ ಮತದಾನ ಆರಂಭಕ್ಕೂ 48 ಗಂಟೆಗಳ ಮೊದಲು ಮದ್ಯದಂಗಡಿಗಳನ್ನು ಬಂದ್ ಮಾಡಲು ಸೂಚನೆ ನೀಡಿವೆ.

ಮೇ 12 ರಂದು ಮತದಾನ ನಡೆಯಲಿರುವುದರಿಂದ ಮೇ 10 ರಂದು ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಬಂದ್ ಆಗಲಿದೆ. ಮೇ 11 ಮತ್ತು 12 ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ. ಮೇ 13 ಮತ್ತು 14 ರಂದು ಮದ್ಯದಂಗಡಿಗಳು ಓಪನ್ ಆಗಲಿವೆ. ಮತ ಎಣಿಕೆ ನಡೆಯಲಿರುವ ಮೇ 15 ರಂದು ಮತ್ತೆ ಮದ್ಯ ಮಾರಾಟಕ್ಕೆ ಬ್ರೇಕ್ ಬೀಳಲಿದೆ.

ಈಗಾಗಲೇ ಜಿಲ್ಲಾ ಚುನಾವಣಾಧಿಕಾರಿಗಳು ಸೂಚನೆ ನೀಡಿದ್ದು, ಎಲ್ಲಿಯೂ ಮದ್ಯ ಮಾರಾಟ ಮಾಡದಂತೆ ತಿಳಿಸಲಾಗಿದೆ. ಆದೇಶ ಉಲ್ಲಂಘಿಸಿದಲ್ಲಿ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...