alex Certify
ಕನ್ನಡ ದುನಿಯಾ       Mobile App
       

Kannada Duniya

ಮತದಾರರಿಗೆ ಇಲ್ಲಿದೆ ಮುಖ್ಯವಾದ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ಚುನಾವಣೆಯನ್ನು ಒಂದೇ ಹಂತದಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಬೇರೆ ರಾಜ್ಯಗಳಲ್ಲಿ ಚುನಾವಣೆ ಇರುವುದಿಲ್ಲ. ಬೇರೆ ರಾಜ್ಯದ ಪೊಲೀಸರು, ಸಿ.ಆರ್.ಪಿ.ಎಫ್. ಸಿಬ್ಬಂದಿಯನ್ನು ಭದ್ರತೆಗೆ ಬಳಸಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಯಾವ ರಾಜಕೀಯ ಪಕ್ಷಗಳು 2 ಹಂತದಲ್ಲಿ ಚುನಾವಣೆ ನಡೆಸಲು ಮನವಿ ಮಾಡಿಲ್ಲ. ಆಯೋಗ ಒಂದೇ ಹಂತದಲ್ಲಿ ಚುನಾವಣೆಗೆ ರೆಡಿಯಾಗಿದೆ. ಹೀಗಿದ್ದರೂ, ಕೇಂದ್ರ ಚುನಾವಣಾ ಆಯೋಗ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಜನವರಿ 22 ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು, ವಿಳಾಸ ಬದಲಾವಣೆಗೆ ಅವಕಾಶವಿದೆ. ಎಲ್ಲಾ ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿಗಳನ್ನು ನೇಮಿಸಿದ್ದು, ಅವರು ಸ್ಥಳ ಪರಿಶೀಲನೆ ನಡೆಸಿ ಪಟ್ಟಿ ತಯಾರಿಸಲಿದ್ದಾರೆ. ಫೆಬ್ರವರಿ 28 ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...