alex Certify
ಕನ್ನಡ ದುನಿಯಾ       Mobile App
       

Kannada Duniya

ರಂಗೇರಿದ ಚುನಾವಣೆ ಕಣ, ಇಂದಿನಿಂದ ಮೋದಿ ಬಿರುಗಾಳಿ ಪ್ರವಾಸ

ವಿಧಾನಸಭೆ ಚುನಾವಣೆ ಕಣ ರಂಗೇರಿದೆ. ಮೇ 12 ರಂದು ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿಡುವಿಲ್ಲದೇ ಪ್ರಚಾರ ನಡೆಸಿದ್ದಾರೆ. ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಬಿರುಗಾಳಿ ಪ್ರವಾಸ ಕೈಗೊಂಡಿದ್ದಾರೆ.

ಬೆಳಿಗ್ಗೆ 11.30 ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಹೆಲಿಕಾಪ್ಟರ್ ನಲ್ಲಿ ಚಾಮರಾಜನಗರ ಜಿಲ್ಲೆ ಸಂತೇಮರಹಳ್ಳಿಯಲ್ಲಿ ನಡೆಯಲಿರುವ ಬಿ.ಜೆ.ಪಿ. ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಮೈಸೂರಿಗೆ ವಾಪಸ್ ಆಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವರು. ಮಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ಪ್ರಯಾಣ ಬೆಳೆಸಲಿದ್ದು, ಪಕ್ಷದ ಸಮಾವೇಶ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಉಡುಪಿಯಿಂದ ಮಂಗಳೂರಿಗೆ ವಾಪಸ್ ಆಗಿ ಅಲ್ಲಿಂದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ತೆರಳುವರು. ಹೆಲಿಕಾಪ್ಟರ್ ನಲ್ಲಿ ಚಿಕ್ಕೋಡಿಗೆ ಆಗಮಿಸಿ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿಂದ ಬೆಳಗಾವಿಗೆ ವಾಪಸ್ ಆಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇಂದಿನಿಂದ ಪ್ರಚಾರ ಕೈಗೊಳ್ಳಲಿರುವ ಮೋದಿ ಮೇ 3, 5, 7 ಹಾಗೂ 8 ರಂದು ರಾಜ್ಯದಲ್ಲಿ ಪ್ರಚಾರ ನಡೆಸುವರು. ಪ್ರತಿ ದಿನ 3 ರ್ಯಾಲಿಗಳಲ್ಲಿ ಅವರು ಭಾಗವಹಿಸಲಿದ್ದು, ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...