alex Certify
ಕನ್ನಡ ದುನಿಯಾ       Mobile App
       

Kannada Duniya

ಜಪ್ತಿಯಾಯ್ತು ಬರೋಬ್ಬರಿ 62.34 ಕೋಟಿ ರೂ.

ಬೆಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರದಲ್ಲಿ ದಾಖಲೆ ಇಲ್ಲದ 62.34 ಕೋಟಿ ರೂ. ಜಪ್ತಿ ಮಾಡಲಾಗಿದೆ.

ಹಣ ಮಾತ್ರವಲ್ಲ, 22 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಸೀಜ್ ಮಾಡಲಾಗಿದೆ. ಚುನಾವಣಾ ಅಕ್ರಮ ಎಸಗಿದ ಆರೋಪದ ಮೇಲೆ 49,036 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದು, ದಾಖಲಾಗಿರುವ 49,036 ಪ್ರಕರಣಗಳಲ್ಲಿ 36,136 ಪ್ರಕರಣಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟು 6087 ಚುನಾವಣೆ ಪ್ರಚಾರ ವಾಹನಗಳಿಗೆ ಅನುಮತಿ ನೀಡಲಾಗಿದೆ. ಇದರಲ್ಲಿ ಬಿ.ಜೆ.ಪಿ.ಯ 2765, ಕಾಂಗ್ರೆಸ್ ನ 3884, ಜೆ.ಡಿ.ಎಸ್. 2370 ವಾಹನಗಳಿಗೆ ಅನುಮತಿ ಕೊಡಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...