alex Certify
ಕನ್ನಡ ದುನಿಯಾ       Mobile App
       

Kannada Duniya

‘34 ಕೋಟಿ ರೂ. ನಗದು, 9 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ’

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹಣ, ಮದ್ಯದ ಹೊಳೆ ಹರಿಯುತ್ತಿದೆ. ಚುನಾವಣಾಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು ಈಗಾಗಲೇ ಹಲವು ಕಡೆ ದಾಳಿ ನಡೆಸಿ ನಗದು, ಮದ್ಯ, ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಾದ ನಂತರದಲ್ಲಿ ಬರೋಬ್ಬರಿ 34 ಕೋಟಿ ರೂ. ಜಪ್ತಿ ಮಾಡಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, 34 ಕೋಟಿ ರೂ. ನಗದು, 9 ಕೋಟಿ ರೂ ಮೌಲ್ಯದ ಮದ್ಯ, 3.71 ಕೋಟಿ ರೂ. ಮೌಲ್ಯದ ಚಿನ್ನಾಭರಣ, 19 ಕೋಟಿ ರೂ. ಮೌಲ್ಯದ ಸೀರೆ, ಲ್ಯಾಪ್ ಟಾಪ್, ಮತ್ತಿತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಜಪ್ತಿ ಮಾಡಿದ ವಸ್ತುಗಳನ್ನು ಹರಾಜು ಹಾಕಲಾಗುವುದು. 10 ಲಕ್ಷ ರೂ. ಗಿಂತ ಜಾಸ್ತಿ ಹಣ ಇದ್ದ ಪ್ರಕರಣ ಆದಾಯ ತೆರಿಗೆ ಇಲಾಖೆ ವ್ಯಾಪ್ತಿಗೆ ಬರಲಿದ್ದು, ಅವರು ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...