alex Certify
ಕನ್ನಡ ದುನಿಯಾ       Mobile App
       

Kannada Duniya

ರಂಗೇರಿದ ಉಪ ಚುನಾವಣೆ ಕಣ

up-cunaven

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗುತ್ತಿರುವ, ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆ ಕಣ ರಂಗೇರಿದೆ.

ಕಳೆದ ಚುನಾವಣೆಯಲ್ಲಿ ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಗಳಿಸಿತ್ತು. ಆಗ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶ್ರೀನಿವಾಸ್ ಪ್ರಸಾದ್ ನಂಜನಗೂಡು ಕ್ಷೇತ್ರದಲ್ಲಿ ಈಗ ಬಿ.ಜೆ.ಪಿ.ಯಿಂದ ಕಣಕ್ಕೆ ಇಳಿದಿದ್ದಾರೆ. ಕಳಲೆ ಕೇಶವ ಮೂರ್ತಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ಗುಂಡ್ಲುಪೇಟೆ ಕ್ಷೇತ್ರದಲ್ಲಿ ದಿ. ಮಹಾದೇವ ಪ್ರಸಾದ್ ಅವರ ಪತ್ನಿ ಗೀತಾ ಮಹಾದೇವ ಪ್ರಸಾದ್ ಕಣಕ್ಕಿಳಿದಿದ್ದಾರೆ. ಬಿ.ಜೆ.ಪಿ.ಯಿಂದ ನಿರಂಜನ್ ಕುಮಾರ್ ಸ್ಪರ್ಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಎರಡೂ ಕ್ಷೇತ್ರಗಳಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಿದ್ದಾರೆ. ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹಾಗೂ ಸಚಿವರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ತಂತ್ರಕ್ಕೆ ಬಿ.ಜೆ.ಪಿ. ಪ್ರತಿತಂತ್ರ ರೂಪಿಸಿದೆ.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಲಾಗಿದ್ದು, ಪಕ್ಷದ ಹಿರಿಯ ನಾಯಕರಿಗೆ ಸಂಘಟನೆ, ಪ್ರಚಾರ ಉಸ್ತುವಾರಿ ಹೊಣೆ ವಹಿಸಲಾಗಿದೆ.

ಸೋಮವಾರ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದು, ಉಪ ಚುನಾವಣೆ ಮತ್ತಷ್ಟು ರಂಗೇರಲಿದೆ.

Subscribe Newsletter

Get latest updates on your inbox...

Opinion Poll

  • ಡೋನಾಲ್ಡ್ ಟ್ರಂಪ್ ಅಮೆರಿಕಾ ಅಧ್ಯಕ್ಷರಾದ ಬಳಿಕ ಜನಾಂಗೀಯ ದ್ವೇಷ ಹೆಚ್ಚಾಗುತ್ತಿದೆಯೇ..?

    View Results

    Loading ... Loading ...