alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ., ಹೆಚ್.ಡಿ.ಕೆ. ಸೇರಿ ಘಟಾನುಘಟಿಗಳಿಂದ ನಾಮಪತ್ರ

ವಿಧಾನಸಭೆ ಚುನಾವಣೆ ಅಖಾಡಕ್ಕೆ ವೇದಿಕೆ ಸಿದ್ಧವಾಗಿದ್ದು, ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ, ಅವರ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಮನಗರ ಕ್ಷೇತ್ರದ ಜೆ.ಡಿ.ಎಸ್. ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವರು.

ಸಚಿವ ರಾಮಲಿಂಗಾ ರೆಡ್ಡಿ ಬಿ.ಟಿ.ಎಂ. ಲೇಔಟ್ ನಲ್ಲಿ, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಗಾಂಧಿನಗರ ಕ್ಷೇತ್ರದಲ್ಲಿ, ಜಮೀರ್ ಅಹಮ್ಮದ್ ಖಾನ್ ಚಾಮರಾಜಪೇಟೆಯಲ್ಲಿ, ಸಚಿವ ಹೆಚ್.ಎಂ. ರೇವಣ್ಣ ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ಹೆಚ್.ಡಿ. ರೇವಣ್ಣ ಹೊಳೆನರಸೀಪುರ, ಜಿ.ಟಿ. ದೇವೇಗೌಡ ಚಾಮುಂಡೇಶ್ವರಿ, ಸಿ.ಟಿ. ರವಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...