alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಪಿ.ಸಿ.ಸಿ. ಅಧ್ಯಕ್ಷರಿಗೇ ಖಚಿತವಾಗಿಲ್ಲ ಟಿಕೆಟ್…!

ವಿಧಾನಸಭೆ ಚುನಾವಣೆ ಕಾವು ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳ ಆಯ್ಕೆಗೂ ಕಸರತ್ತು ನಡೆದಿದೆ. ಕೆಲವರಿಗೆ ಟಿಕೆಟ್ ಖಚಿತವಾಗಿದ್ದರೆ, ಇನ್ನೂ ಕೆಲವರಿಗೆ ಟಿಕೆಟ್ ಕನ್ಫರ್ಮ್ ಆಗಿಲ್ಲ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಸೋಲು ಕಂಡ ಕಾರಣ ಸಿ.ಎಂ. ಹುದ್ದೆಯಿಂದ ಹಿಂದೆ ಸರಿಯುವಂತಾಗಿತ್ತು. ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿರುವ ಪರಮೇಶ್ವರ್ ಅವರಿಗೆ ಟಿಕೆಟ್ ಸಿಗುವ ಖಚಿತತೆಯೇ ಇಲ್ಲವಾಗಿದೆ.

ಇದನ್ನು ಪರಮೇಶ್ವರ್ ಅವರೇ ತಿಳಿಸಿದ್ದಾರೆ. ನನ್ನ ಟಿಕೆಟ್ ಬಗ್ಗೆಯೇ ನನಗೆ ಖಚಿತತೆ ಇಲ್ಲ, ಇನ್ನು ಅಶೋಕ್ ಖೇಣಿ ಟಿಕೆಟ್ ಬಗ್ಗೆ ಏನು ಹೇಳಲಿ ಎಂದು ಪರಮೇಶ್ವರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಶೋಕ್ ಖೇಣಿ ಅವರಿಗೆ ಟಿಕೆಟ್ ನೀಡುವ ಕುರಿತು ಎದುರಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನನಗೇ ಟಿಕೆಟ್ ಖಚಿತವಾಗಿಲ್ಲ. ನನಗೆ ಮಾತ್ರವಲ್ಲ, ಯಾರಿಗೂ ಕಾಂಗ್ರೆಸ್ ಟಿಕೆಟ್ ಇನ್ನೂ ಅಂತಿಮಗೊಳಿಸಿಲ್ಲ. ಹೀಗಿರುವಾಗ ಖೇಣಿಗೆ ಟಿಕೆಟ್ ನೀಡುವ ಬಗ್ಗೆ ಏನು ಹೇಳಲಿ ಎಂದು ಪ್ರಶ್ನಿಸಿದ್ದಾರೆ.

ಟಿಕೆಟ್ ಆಕಾಂಕ್ಷಿಗಳು ತಮ್ಮ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದಾರೆ. ತಮ್ಮನ್ನೂ ಭೇಟಿ ಮಾಡುತ್ತಿದ್ದಾರೆ. ಹೈಕಮಾಂಡ್ ಎಲ್ಲಾ ಮಾಹಿತಿ ಸಂಗ್ರಹಿಸಿ ಟಿಕೆಟ್ ನೀಡಲಿದೆ ಎಂದು ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...