alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರ ಮನೆ ಎದುರು ಶಾಸಕ ರಾಜೇಶ್ ಬೆಂಬಲಿಗರ ಪ್ರತಿಭಟನೆ

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಜಗಳೂರು ಶಾಸಕ ರಾಜೇಶ್ ಅವರಿಗೆ ಟಿಕೆಟ್ ತಪ್ಪಿದ್ದಕ್ಕೆ ಬೆಂಬಲಿಗರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬೇರೆಯವರಿಗೆ ಟಿಕೆಟ್ ಘೋಷಣೆಯಾದ ಹಿನ್ನಲೆಯಲ್ಲಿ ರಾಜೇಶ್ ಬೆಂಬಲಿಗರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದು, ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಬೇರೆಯವರಿಗೆ ಟಿಕೆಟ್ ಘೋಷಣೆಯಾಗುತ್ತಲೇ ರಾಜೇಶ್, ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದು, ಅವರು ಟಿಕೆಟ್ ಕೊಡುವ ಭರವಸೆ ನೀಡಿದ್ದರೆನ್ನಲಾಗಿದೆ. ನಾಮಪತ್ರ ಸಲ್ಲಿಕೆ ಇಂದಿನಿಂದ ಆರಂಭವಾಗಿದ್ದು, ಕೂಡಲೇ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ರಾಜೇಶ್ ಬೆಂಬಲಿಗರು ಸಚಿವ ಮಲ್ಲಿಕಾರ್ಜುನ್ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...