alex Certify
ಕನ್ನಡ ದುನಿಯಾ       Mobile App
       

Kannada Duniya

ಉಡುಪಿಯಲ್ಲಿ ರಾಜನಾಥ್ ಸಿಂಗ್ ಭರ್ಜರಿ ಪ್ರಚಾರ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇಂದು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಉಡುಪಿ ಜಿಲ್ಲೆ ಕಾರ್ಕಳದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಸುನಿಲ್ ಕುಮಾರ್ ನಾಮಪತ್ರ ಸಲ್ಲಿಸಲಿದ್ದು, ರಾಜನಾಥ್ ಸಿಂಗ್ ಭಾಗಿಯಾಗಲಿದ್ದಾರೆ. ನಂತರ ನಡೆಯುವ ಬೃಹತ್ ಬಹಿರಂಗ ಸಮಾವೇಶದಲ್ಲಿ ಅವರು ಭಾಷಣ ಮಾಡಲಿದ್ದಾರೆ.

ಬಳಿಕ ಹೆಲಿಕಾಪ್ಟರ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಗೆ ತೆರಳಿ ಪಕ್ಷದ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಅವರು, ಉಡುಪಿಗೆ ವಾಪಸ್ ಆಗಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪೇಜಾವರ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮಣಿಪಾಲ ಕಂಟ್ರಿ ಕ್ಲಬ್ ನಲ್ಲಿ ವೈದ್ಯರು, ತಜ್ಞರೊಂದಿಗೆ ಸಂವಾದ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...