alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ, ರಾಜ್ಯ ಗುಪ್ತಚರ ಮಾಹಿತಿ ಪ್ರಕಾರ ಯಾರಿಗೆ ಎಷ್ಟು ಸ್ಥಾನ ಗೊತ್ತಾ…?

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಮೇ 15 ರಂದು ಪ್ರಕಟವಾಗಲಿದೆ. ಈಗಾಗಲೇ ಅನೇಕ ಸಂಸ್ಥೆಗಳು ಬಿಡುಗಡೆ ಮಾಡಿರುವ ಮತದಾನ ಪೂರ್ವ ಮತ್ತು ಮತದಾನೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಲಾಗಿದೆ.

ಒಂದೆರಡು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಇಲ್ಲವೇ ಬಿ.ಜೆ.ಪಿ. ಪೂರ್ಣಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎನ್ನಲಾಗಿದೆ. ಬಹುತೇಕ ಸಮೀಕ್ಷೆಗಳು ಜೆ.ಡಿ.ಎಸ್. ಕಿಂಗ್ ಮೇಕರ್ ಆಗಲಿದೆ ಎಂದು ತಿಳಿಸಿವೆ.

ಇನ್ನು ರಾಜ್ಯ ಮತ್ತು ಕೇಂದ್ರ ಗುಪ್ತಚರ ಇಲಾಖೆಯೂ ಮಾಹಿತಿ ಕಲೆ ಹಾಕಿದ್ದು, ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ಸಿಗಲಿದೆ ಎಂದು ಹೇಳಲಾಗಿದೆ.

ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ಕಾಂಗ್ರೆಸ್ -102, ಬಿ.ಜೆ.ಪಿ. -70, ಜೆ.ಡಿ.ಎಸ್. -28 ಸ್ಥಾನಗಳಲ್ಲಿ ಜಯಗಳಿಸಬಹುದಾಗಿದೆ.

ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ಪ್ರಕಾರ, ಕಾಂಗ್ರೆಸ್ 95 ರಿಂದ 102 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ. ಬಿ.ಜೆ.ಪಿ. 80 ರಿಂದ 85 ಹಾಗೂ ಜೆ.ಡಿ.ಎಸ್. 35 ರಿಂದ 40 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

30 ಕ್ಷೇತ್ರಗಳಲ್ಲಿ ಕಾಂಗ್ರೆಸ್, ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ನಡುವೆ ತ್ರಿಕೋನ ಸ್ಪರ್ಧೆ ಇದೆ. 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ –ಜೆ.ಡಿ.ಎಸ್., 10 ಕ್ಷೇತ್ರಗಳಲ್ಲಿ ಬಿ.ಜೆ.ಪಿ. –ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ.

ಮಾಹಿತಿ ಪ್ರಕಾರ, ಕಾಂಗ್ರೆಸ್, ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ಗಳಿಸಲಿರುವ ಸ್ಥಾನಗಳಲ್ಲಿ 10 ಸ್ಥಾನ ಹೆಚ್ಚು, ಕಡಿಮೆ ಆಗಲಿವೆ. ಗುಪ್ತಚರ ಇಲಾಖೆ ಸಾಮಾನ್ಯವಾಗಿ ಆಡಳಿತದಲ್ಲಿರುವ ಪಕ್ಷಗಳ ಪರವಾಗಿಯೇ ವರದಿ ನೀಡುತ್ತದೆ ಎಂಬ ಅಪವಾದ ಕೂಡ ಇದೆ. ಫಲಿತಾಂಶದ ಬಗ್ಗೆ ನಿಖರವಾದ ಮಾಹಿತಿಯನ್ನು ತಿಳಿಯಲು ನಾಳೆ ಮಧ್ಯಾಹ್ನದವರೆಗೆ ಕಾಯಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...