alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕ ಘೋಷಣೆ

ಸ್ಥಳೀಯ ಸಂಸ್ಥೆ ಚುನಾವಣೆಗೆ ದಿನಾಂಕ ನಿಗದಿಪಡಿಸಿ ರಾಜ್ಯ ಚುನಾವಣಾ ಆಯೋಗ ಇಂದು ದಿನಾಂಕ ಘೋಷಿಸಿದ್ದು, ಆಗಸ್ಟ್ 29 ಕ್ಕೆ ಮತದಾನ ನಡೆಯಲಿದ್ದರೆ ಸೆಪ್ಟೆಂಬರ್ 1 ರಂದು ರಂದು ಫಲಿತಾಂಶ ಹೊರ ಬೀಳಲಿದೆ.

ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಚಾರಿ ಈ ಕುರಿತು ಘೋಷಣೆ ಮಾಡಿದ್ದು, ಎರಡು ಹಂತಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದೆ ಎಂದು ತಿಳಿದುಬಂದಿದೆ.

ಒಟ್ಟು 105 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದ್ದು, ಈ ಪೈಕಿ 29 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯಿತಿಗಳಾಗಿವೆ.

ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ನಗರ ಪಾಲಿಕೆ ಚುನಾವಣೆಗಳಿಗೆ ತಡೆ ಕೋರಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿರುವ ಕಾರಣ ಈ ಮೂರು ಸ್ಥಳೀಯ ಸಂಸ್ಥೆಗಳಿಗೆ ದಿನಾಂಕ ಘೋಷಿಸಿಲ್ಲ.

ಆಗಸ್ಟ್ 10ರಂದು ಚುನಾವಣೆಗೆ ಅಧಿಸೂಚನೆ ಹೊರ ಬೀಳಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...