alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರು ಅಖಾಡದಲ್ಲಿಂದು ಸಿ.ಎಂ., ಮಾಜಿ ಸಿ.ಎಂ.ಗಳಿಂದ ಪ್ರಚಾರ

ಮೈಸೂರು: ರಾಜ್ಯದ ಗಮನಸೆಳೆದಿರುವ ಮೈಸೂರು ಜಿಲ್ಲೆಯ ರಾಜಕಾರಣ ಇವತ್ತು ಇನ್ನಷ್ಟು ರಂಗೇರಲಿದೆ. ಸಿ.ಎಂ. ಮತ್ತು ಮಾಜಿ ಸಿ.ಎಂ.ಗಳು ಮೈಸೂರಿನಲ್ಲಿ ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ಘೋಷಣೆಗೂ ಮೊದಲೇ ಬಿ.ವೈ. ವಿಜಯೇಂದ್ರ ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಥ್ ನೀಡಲಿದ್ದಾರೆ. ಅಲ್ಲದೇ, ಪುತ್ರನ ಪರವಾಗಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಪುತ್ರ ಡಾ. ಯತೀಂದ್ರ ಪರವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಕ್ಷೇತ್ರದ 9 ಹಳ್ಳಿಗಳಲ್ಲಿ ಸಿದ್ಧರಾಮಯ್ಯ ಪ್ರಚಾರ ನಡೆಸಿ ಪುತ್ರನ ಪರ ಮತಯಾಚಿಸಲಿದ್ದಾರೆ.

ಕೆ.ಆರ್. ನಗರ ಜೆ.ಡಿ.ಎಸ್. ಅಭ್ಯರ್ಥಿ ಸಾ.ರಾ. ಮಹೇಶ್ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾಜಿ ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿ ಹಾಜರಿರಲಿದ್ದು, ಬಳಿಕ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...