alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ. ಭರ್ಜರಿ ಕ್ಯಾಂಪೇನ್

ಮೈಸೂರು: ಕಳೆದ 10 ದಿನಗಳಿಂದ ರಾಜ್ಯದ 60 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದಿನಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತಯಾಚಿಸಲಿದ್ದಾರೆ.

ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿರುವ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ತಾವು ಸ್ಪರ್ಧಿಸಿರುವ ಚಾಮುಂಡೇಶ್ವರಿ ಕ್ಷೇತ್ರ, ಪುತ್ರ ಡಾ. ಯತೀಂದ್ರ ಸ್ಪರ್ಧಿಸಿರುವ ವರುಣಾ ಕ್ಷೇತ್ರದಲ್ಲಿ ಅವರು ಪ್ರಚಾರ ನಡೆಸಲಿದ್ದಾರೆ.

ಸಿದ್ಧರಾಮಯ್ಯ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ ಪ್ರಬಲ ಪೈಪೋಟಿ ನೀಡಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿಯೂ ಸಿ.ಎಂ. ಸ್ಪರ್ಧಿಸಿದ್ದು, ಸಂಸದ ಬಿ. ಶ್ರೀರಾಮುಲು ಬಿ.ಜೆ.ಪಿ. ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...