alex Certify
ಕನ್ನಡ ದುನಿಯಾ       Mobile App
       

Kannada Duniya

ಡಿ. 19 ರಿಂದ 2 ನೇ ಹಂತದ ಜನಾಶೀರ್ವಾದ ಪ್ರವಾಸ

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆಸಿರುವ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಯಾತ್ರೆಯನ್ನು ಆರಂಭಿಸಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸೆಂಬರ್ 19 ರಿಂದ 2 ನೇ ಹಂತದ ಜನಾಶೀರ್ವಾದ ಪ್ರವಾಸ ಕೈಗೊಂಡಿದ್ದಾರೆ.

ಸಿದ್ಧರಾಮಯ್ಯ ಪ್ರವಾಸದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್ 19 ರಿಂದ ಜನವರಿ 13 ರ ವರೆಗೆ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಬಾಗಲಕೋಟೆ, ವಿಜಯಪುರ, ಬೆಳಗಾವಿ, ಹಾವೇರಿ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಾಗಿದೆ.

ಸರ್ಕಾರದ ಸಾಧನೆಯನ್ನು ಜನರಿಗೆ ತಿಳಿಸಿ ಮುಂದಿನ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಸಿ.ಎಂ. ಪ್ರವಾಸ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...