alex Certify
ಕನ್ನಡ ದುನಿಯಾ       Mobile App
       

Kannada Duniya

ವೋಟರ್ ಐಡಿ ಇಲ್ಲದಿದ್ರೂ ಮತ ಹಾಕಬಹುದು, ಆದರೆ….

ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ವೋಟರ್ ಐ.ಡಿ. ಇಲ್ಲದಿದ್ರೂ ನೀವು ಮತ ಚಲಾಯಿಸಬಹುದು. ಆದರೆ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರಬೇಕು.

ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಮತದಾರರು ವೋಟರ್ ಐ.ಡಿ. ಇಲ್ಲದಿದ್ದರೆ, ಚುನಾವಣಾ ಆಯೋಗ ನಿಗದಿಪಡಿಸಿದ 12 ಗುರುತಿನ ಚೀಟಿಗಳನ್ನು ಹಾಜರುಪಡಿಸಿ ಮತ ಚಲಾವಣೆ ಮಾಡಬಹುದಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದ ಸಿಬ್ಬಂದಿ ಕಡ್ಡಾಯವಾಗಿ ಕೆಲಸಕ್ಕೆ ಹಾಜರಾಗಬೇಕಿದೆ. ಅನಾರೋಗ್ಯ, ಅನಿವಾರ್ಯ ಕಾರಣವಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಪಡೆಯಬೇಕಿದೆ. ನೀತಿ ಸಂಹಿತೆಯನ್ನು ಮಾಧ್ಯಮಗಳು ಪಾಲಿಸಬೇಕು ಎಂದು ಹೇಳಿದ್ದಾರೆ.

ಕ್ಷೇತ್ರದ ಹೊರಗಿನವರು ಕ್ಷೇತ್ರವನ್ನು ಬಿಟ್ಟು ತೆರಳಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...