alex Certify
ಕನ್ನಡ ದುನಿಯಾ       Mobile App
       

Kannada Duniya

ಎರಡನೇ ಹಂತದ ಪಂಚಾಯಿತಿ ಚುನಾವಣೆಗೆ ಮತದಾನ

vot 203

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಎರಡನೇ ಹಂತದ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಅಲ್ಲಲ್ಲಿ ಸಣ್ಣಪುಟ್ಟ ಗೊಂದಲ ಉಂಟಾಗಿದೆ. ದಕ್ಷಿಣ ಕನ್ನಡ, ಮಡಿಕೇರಿ ಸೇರಿದಂತೆ ಹಲವು ಕಡೆಯ ಕೆಲ ಮತಗಟ್ಟೆಗಳಲ್ಲಿ ಮತಯಂತ್ರಗಳು ಕೈಕೊಟ್ಟು ಕೆಲಕಾಲ ಗೊಂದಲ ಉಂಟಾಗಿತ್ತು.

ಕೆಲವು ಕಡೆಗಳಲ್ಲಿ ಅಭ್ಯರ್ಥಿಗಳ ಕ್ರಮಸಂಖ್ಯೆ ಅದಲು ಬದಲಾದ ಕಾರಣ ಮತದಾನ ನಿಲ್ಲಿಸಲಾಗಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಮತದಾನ ಬಹಿಷ್ಕರಿಸಲಾಗಿದೆ. ಜೇವರ್ಗಿ ತಾಲ್ಲೂಕಿನ ಗ್ರಾಮವೊಂದರ ಮತಗಟ್ಟೆಯಲ್ಲಿ ಒಬ್ಬರೂ ಮತದಾನ ಮಾಡಿಲ್ಲ. ಇಲ್ಲಿನ ಗ್ರಾಮಪಂಚಾಯಿತಿ ಕೇಂದ್ರ ಸ್ಥಳಾಂತರ ಮಾಡಿದ ಹಿನ್ನೆಲೆಯಲ್ಲಿ ಮತದಾನ ಮಾಡದಿರಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಮತದಾರರ ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಹೊಳೆನರಸೀಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರು ವಾಹನ ಜಖಂಗೊಳಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಬೆಂಬಲಿಗರು ದಾಂಧಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲಲ್ಲಿ ಸಣ್ಣಪುಟ್ಟ ಘಟನೆ ಹೊರತುಪಡಿಸಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ. ಮತದಾರರು ಬೆಳಗ್ಗಿನಿಂದಲೇ ಮತಗಟ್ಟೆಗಳ ಬಳಿ ಸಾಲಾಗಿ ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...