alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಡಾನೆ ದಾಳಿಗೆ ಬಲಿಯಾದ ಯುವಕ

ane-cam-mm

ಚಾಮರಾಜನಗರ: ಕಾಡಾನೆ ದಾಳಿಗೆ ಯುವಕನೊಬ್ಬ ಬಲಿಯಾದ ಘಟನೆ, ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ತಾಲ್ಲೂಕಿನಲ್ಲಿ ನಡೆದಿದೆ.

ಹೊಸಪಾಳ್ಯ ಗ್ರಾಮದ 22 ವರ್ಷದ ಜಡೇಸ್ವಾಮಿ ಮೃತಪಟ್ಟವರು. ಜಮೀನಿನಲ್ಲಿ ಮಲಗಿದ್ದ ಜಡೇಸ್ವಾಮಿ ಅವರ ಮೇಲೆ ದಾಳಿ ಮಾಡಿದ ಕಾಡಾನೆ, ತುಳಿದು ಸಾಯಿಸಿದೆ. ಇದರಿಂದಾಗಿ ಜಮೀನಿನಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ. ಮಲೆಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದ ಜಡೇಸ್ವಾಮಿ ಜಮೀನಿಗೆ ತೆರಳಿದ್ದು, ಅಲ್ಲೇ ಮಲಗಿದ್ದರು.

ರಾತ್ರಿ ಕಾಡಾನೆ ದಾಳಿ ಮಾಡಿ ಅವರನ್ನು ತುಳಿದು ಸಾಯಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಸ್ಥಳಕ್ಕೆ ಆಗಮಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...