alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆ ಮುಂದೆ ನಿಂತಿದ್ದಾಗಲೇ ನಡೆಯಿತು ದುರಂತ

elephant

ಮಡಿಕೇರಿ: ರಾಜ್ಯದಲ್ಲಿ ಕಾಡಾನೆ ದಾಳಿಯಿಂದ ಹಲವರು ಮೃತಪಟ್ಟಿದ್ದಾರೆ. ಶುಕ್ರವಾರವಷ್ಟೇ ಸುಬ್ರಹ್ಮಣ್ಯ ಸಮೀಪದ ಬಿಸಿಲೆ ಎಂಬಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಒಬ್ಬರು ಸಾವು ಕಂಡಿದ್ದರು.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹುಣಸೆಪಾಳ್ಯ ಎಂಬಲ್ಲಿ ತಮಿಳುನಾಡಿನ ಕೂಲಿಕಾರ್ಮಿನೊಬ್ಬನನ್ನು ಕಾಡಾನೆ ತುಳಿದು ಸಾಯಿಸಿತ್ತು. ಶನಿವಾರ ಮನೆಯ ಮುಂದೆ ನಿಂತಿದ್ದ ವ್ಯಕ್ತಿಯನ್ನು ಕಾಡಾನೆ ತುಳಿದು ಸಾಯಿಸಿದ ಘಟನೆ ನಡೆದಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ತಿತಿಮತಿ ಗ್ರಾಮದಲ್ಲಿ ಮನೆಯ ಮುಂದೆ ನಿಂತಿದ್ದ 55 ವರ್ಷದ ರಾಜು ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಗ್ರಾಮದ ಸುತ್ತಮುತ್ತ ಕಾಡಾನೆ ದಾಳಿ ಹೆಚ್ಚಾಗಿದ್ದು, ಅವುಗಳನ್ನು ದೂರಕ್ಕೆ ಓಡಿಸಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಆದರೆ, ಅರಣ್ಯ ಇಲಾಖೆಯಿಂದ ನಿರ್ಲಕ್ಷ್ಯ ವಹಿಸಲಾಗಿತ್ತು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಸಂಬಂಧ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...