alex Certify
ಕನ್ನಡ ದುನಿಯಾ       Mobile App
       

Kannada Duniya

ಸುಳ್ಯ ಬಳಿ ಕಾಡಾನೆಗಳ ಹಿಂಡು, ಸ್ಥಳೀಯರಲ್ಲಿ ಆತಂಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪಟ್ಟಣದ ಸಮೀಪ ಭಸ್ಮಡ್ಕದ ಪಯಸ್ವಿನಿ ನದಿಯಲ್ಲಿ 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ.

ನಿನ್ನೆಯಿಂದಲೂ ಬೀಡುಬಿಟ್ಟಿರುವ ಕಾಡಾನೆಗಳು ನದಿ ನೀರಿನಲ್ಲಿ ಆಟವಾಡುತ್ತಾ ಕಾಡಿನಂಚಿನಲ್ಲಿಯೇ ಇವೆ. ಗ್ರಾಮದ ಬಳಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿದ್ದು, ಕಾಡಾನೆಗಳನ್ನು ಕಾಡಿಗೆ ಅಟ್ಟಲು ಹರಸಾಹಸ ನಡೆಸಿದ್ದಾರೆ.

ಆನೆಗಳ ಹಿಂಡು ಊರಿಗೆ ನುಗ್ಗಿದಲ್ಲಿ ಅಪಾಯ ಎದುರಾಗುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...