alex Certify
ಕನ್ನಡ ದುನಿಯಾ       Mobile App
       

Kannada Duniya

ಅಕ್ರಮ ಸಂಪತ್ತು ಹೊಂದಿದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಜನಪ್ರತಿನಿಧಿಗಳು, ಸರ್ಕಾರಿ ನೌಕರರು ತಮ್ಮ ಕುಟುಂಬದ ಆಸ್ತಿ ವಿವರ ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದೆ.

ಚುನಾಯಿತ ಪ್ರತಿನಿಧಿಗಳು, ಸರ್ಕಾರಿ ನೌಕರರು ಇನ್ನು ಮುಂದೆ ತಮ್ಮ ಆಸ್ತಿಯ ಮಾಹಿತಿ ನೀಡುವುದರ ಜೊತೆಗೆ, ತಂದೆ, ತಾಯಿ, ಪತ್ನಿ, ಮಕ್ಕಳ ಹೆಸರಲ್ಲಿ ಇರುವ ಸ್ಥಿರಾಸ್ತಿ, ಚರಾಸ್ತಿ, ನಗದು, ಬ್ಯಾಂಕ್ ಖಾತೆ ಮಾಹಿತಿಗಳನ್ನು ಪ್ರತಿವರ್ಷವೂ ಸಲ್ಲಿಸಬೇಕಿದೆ.

ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಸಚಿವ ಟಿ.ಬಿ. ಜಯಚಂದ್ರ, ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಇದುವರೆಗೆ ನೌಕರರು, ಜನಪ್ರತಿನಿಧಿಗಳು ತಮ್ಮ ಹಾಗೂ ತಮ್ಮ ಪತ್ನಿಯ ಹೆಸರಲ್ಲಿರುವ ಆಸ್ತಿ, ಸಾಲದ ವಿವರಗಳನ್ನು ನೀಡಬೇಕಿತ್ತು. ಇನ್ನು ಮುಂದೆ ತಮ್ಮ ಹಾಗೂ ತಮ್ಮ ಕುಟುಂಬದವರು, ಅವಲಂಬಿತರ ಆಸ್ತಿ ವಿವರವನ್ನು ಕಡ್ಡಾಯವಾಗಿ ಸಲ್ಲಿಸಬೇಕಿದೆ ಎಂದು ತಿಳಿಸಿದ್ದಾರೆ.

ಬ್ಯಾಂಕ್ ಖಾತೆ ವಿವರ, ನಗದು, 10,000 ರೂ. ಮೇಲ್ಪಟ್ಟ ವಸ್ತುಗಳ ವಿವರ, 25,000 ರೂ. ಮೇಲ್ಪಟ್ಟ ಗೃಹೋಪಯೋಗಿ ವಸ್ತುಗಳು, ಮೊದಲಾದವುಗಳ ಮಾಹಿತಿಯನ್ನು ಸಲ್ಲಿಸಬೇಕಿದೆ. ಆಸ್ತಿ ಖರೀದಿಸುವಾಗ, ಮಾರ್ಗಸೂಚಿ ದರದ ಆಧಾರದಲ್ಲಿ ಮಾಹಿತಿ ನೀಡಬೇಕಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...