alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ವಿರುದ್ದ ಈಶ್ವರಪ್ಪ ತೀವ್ರ ವಾಗ್ದಾಳಿ

eshwarappa1ptiಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಇಂದು ಅರಮನೆ ಮೈದಾನದಲ್ಲಿ ನಡೆದ ‘ಸಂಘಟನೆ ಉಳಿಸೋಣ ಬನ್ನಿ’ ಸಮಾವೇಶದಲ್ಲಿ ಯಡಿಯೂರಪ್ಪ ವಿರುದ್ದ ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಾವುಗಳು ತಂದೆ-ತಾಯಿಗೆ ಹುಟ್ಟಿದವರು ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಬೇರೆ ಕಡೆ ಹೋಗಲ್ಲ. ಹೊಸ ಪಕ್ಷ ಕಟ್ಟಲ್ಲವೆಂದು ಹೇಳಿದ ಈಶ್ವರಪ್ಪ, ಈ ಸಮಾವೇಶದಲ್ಲಿ ಪಾಲ್ಗೊಂಡರೆ ಹುಷಾರ್ ಎಂದು ಎಚ್ಚರಿಕೆ ನೀಡುತ್ತೀರಾ. ಈ ಮೂಲಕ ನಾನು ನಿಮಗೆ ಎಚ್ಚರಿಕೆ ನೀಡುತ್ತೇನೆ ಎಂದಿದ್ದಾರೆ.

ಈ ಹಿಂದೆ ಅಮಿತ್ ಷಾ ಜೊತೆ ಮಾತುಕತೆ ವೇಳೆ ಪಕ್ಷದಲ್ಲಿ ತಲೆದೋರಿರುವ ಸಮಸ್ಯೆಗಳನ್ನು ಬಗೆಹರಿಸಲು ಗಡುವು ನೀಡಲಾಗಿತ್ತಲ್ಲದೇ ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಲಾಗಿತ್ತು. ಆದರೆ ಒಮ್ಮೆಯೂ ಸಮಿತಿ ಸಭೆ ನಡೆದಿಲ್ಲವೆಂದು ಹೇಳಿದ ಈಶ್ವರಪ್ಪ, ಪಕ್ಷದಲ್ಲಿ ಹಲವು ವರ್ಷಗಳಿಂದ ದುಡಿದವರನ್ನು ಕಡೆಗಣಿಸಿ ಹೊಸಬರಿಗೆ ಮಣೆ ಹಾಕುತ್ತಿದ್ದೀರಿ ಎಂದು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...