alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಮ್ಮೆ ಶುರುವಾಗಿದೆ ಈಶ್ವರಪ್ಪ-ಯಡಿಯೂರಪ್ಪ ಬಣದ ಆಂತರಿಕ ಕಚ್ಚಾಟ

ಶಿವಮೊಗ್ಗ ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಮತ್ತೊಮ್ಮೆ ಆರಂಭಗೊಂಡಿದೆ. ಪಕ್ಷದ ಜಿಲ್ಲಾ ಮುಖಂಡರೊಬ್ಬರು ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಈಶ್ವರಪ್ಪ ಬೆಂಬಲಿಗರುವ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಎಸ್. ರುದ್ರೇಗೌಡರಿಗೆ ಟಿಕೆಟ್ ನೀಡುವಂತೆ ಹಲವರು ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ಬಿಜೆಪಿ ಉಪಾಧ್ಯಕ್ಷ ಬಿಳಕಿ ಕೃಷ್ಣಮೂರ್ತಿ, ಕೆ.ಎಸ್. ಈಶ್ವರಪ್ಪ ಕುರಿತು ಹಗುರವಾಗಿ ಮಾತನಾಡಿದ್ದಾರೆ. ಇದು ಈಶ್ವರಪ್ಪ ಬೆಂಬಲಿಗರನ್ನು ಕೆರಳಿಸಿದೆ. ಅಷ್ಟೇ ಅಲ್ಲದೇ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಸಾಬೀತಾಗಿದೆ.

ಬಿಳಕಿ ಕೃಷ್ಣಮೂರ್ತಿ ಹೇಳಿಕೆಯನ್ನು ಖಂಡಿಸಿ ಇಂದು ಕೆ.ಎಸ್. ಈಶ್ವರಪ್ಪ ಯಂಗ್ ಬ್ರಿಗೇಡ್ ಕಾರ್ಯಕರ್ತರು, ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಮಧ್ಯ ಪ್ರವೇಶಿಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದಾರೆ.

ಪ್ರತಿಭಟನೆ ನಡೆಸಿದರೆ ಪಕ್ಷದ ಸಂಘಟನೆಗೆ ಧಕ್ಕೆ ಉಂಟಾಗುತ್ತದೆ. ಬಿಳಕಿ ಕೃಷ್ಣಮೂರ್ತಿ ಹೇಳಿಕೆಯನ್ನು ಸಮರ್ಥಿಸುವುದಿಲ್ಲ. ಆದರೆ ಅವರ ಹೇಳಿಕೆಯನ್ನು ಮುಂದಿಟ್ಟುಕೊಂಡು ಚುನಾವಣಾ ಸಂದರ್ಭದಲ್ಲಿ ವಿವಾದ ಹುಟ್ಟುಹಾಕುವುದು ಬೇಡ ಎಂಬ ಮಾತನ್ನು ಪುರಸ್ಕರಿಸಿ ಬ್ರಿಗೇಡ್ ಕಾರ್ಯಕರ್ತರು ಪ್ರತಿಭಟನೆಯನ್ನು ಹಿಂಪಡೆಯುವ ಮೂಲಕ ಪಕ್ಷಕ್ಕೆ ಆಗುತ್ತಿದ್ದ ಮುಜುಗರವನ್ನು ತಪ್ಪಿಸಿದ್ದಾರೆ.

ಚುನಾವಣೆ ಹತ್ತಿರದಲ್ಲಿರುವಂತೆ ಮತ್ತೊಮ್ಮೆ ಪಕ್ಷದಲ್ಲಿ ಉಂಟಾಗಿರುವ ಈ ಬೆಳವಣಿಗೆ ಕಾರ್ಯಕರ್ತರಲ್ಲಿ ಗೊಂದಲವನ್ನು ಮೂಡಿಸಿದೆ. ಈ ಹಿಂದೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆಯಾದಾಗಲೂ ಬಿಜೆಪಿಯಲ್ಲಿ ಭಿನ್ನಮತ ಸೃಷ್ಟಿಯಾಗಿತ್ತು. ಕೇಂದ್ರ ವರಿಷ್ಟರೇ ಹಲವು ಬಾರಿ ಸಂಧಾನ ನಡೆಸುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದರು. ಇದೀಗ ಮತ್ತೆ ಬಿಜೆಪಿಯಲ್ಲಿ ಬಣ ರಾಜಕಾರಣ ತಾರಕಕ್ಕೇರುವ ಲಕ್ಷಣ ಕಂಡುಬಂದಿದ್ದು ವರಿಷ್ಟರು ಗೊಂದಲಕ್ಕೆ ತೆರೆ ಎಳೆಯುತ್ತಾರೆಯೇ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...