alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರದ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಅನುಸರಿಸಿದ ಧೋರಣೆಯನ್ನೇ ಮುಂದೆ ಅನುಸರಿಸುತ್ತದೆಯೇ ಎಂಬುದನ್ನು ರಾಜ್ಯದ ಜನತೆ ಮುಂದೆ ಬಹಿರಂಗಪಡಿಸಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಗೋಹತ್ಯೆ ನಿಷೇಧ ಕುರಿತು ಕಾಂಗ್ರೆಸ್ ತನ್ನ ನಿಲುವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಹಿಂದೂ ಹಾಗೂ ಮುಸಲ್ಮಾನರು ಅನ್ಯೋನ್ಯವಾಗಿದ್ದರು. ಆದರೆ ಮುಸಲ್ಮಾನರನ್ನು ಸಂತೃಪ್ತ ಪಡಿಸುವ ಉದ್ದೇಶದಿಂದ ಕೆಲವು ಮುಸಲ್ಮಾನ ಗೂಂಡಾಗಳಿಗೆ ಬೆಂಬಲ ಕೊಟ್ಟು ಹಿಂದೂ-ಮುಸಲ್ಮಾನರ ನಡುವೆ ಬೆಂಕಿ ಹಚ್ಚಿದ್ದಾರೆ. ಮುಂದೆ ಮುಸಲ್ಮಾನ ಗೂಂಡಾಗಳ ಚಟುವಟಿಕೆಯನ್ನು ಹತ್ತಿಕ್ಕಲಾಗುತ್ತದೆ? ಇಲ್ಲವೇ ಇದೇ ರೀತಿ ಬೆಂಬಲ ನೀಡುತ್ತಿರೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಹಿಂದ ವರ್ಗಕ್ಕೆ ನ್ಯಾಯ ಕೊಡುತ್ತೇವೆ ಎಂದು ಕಳೆದ ಐದು ವರ್ಷಗಳಲ್ಲಿ ಬಜೆಟ್ ನಲ್ಲಿ ಮೀಸಲಿಟ್ಟ ಹಣದಲ್ಲಿ ಶೇ. 50 ರಷ್ಟನ್ನು ಖರ್ಚು ಮಾಡಿಲ್ಲ. ಇದು ಹಿಂದ ವರ್ಗಕ್ಕೆ ಮಾಡಿದ ದ್ರೋಹ. ದ್ರೋಹ ಎಸಗಿದ್ದಕ್ಕೆ ಕ್ಷಮೆ ಹೇಳುತ್ತೀರೋ? ಇಲ್ಲವೋ ಬಹಿರಂಗಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರನ್ನು ಈಶ್ವರಪ್ಪ ಆಗ್ರಹಿಸಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗುವುದು. ಹಿಂದೂ ಮುಸಲ್ಮಾನರ ನಡುವೆ ಸ್ನೇಹಮಯ ವಾತಾವರಣ ಮೂಡಿಸುವುದಕ್ಕೆ ಆದ್ಯತೆ ನೀಡುತ್ತೇವೆ. ಹಿಂದ ವರ್ಗಗಳ ಅಭಿವೃದ್ಧಿಗೆ ಒತ್ತು ನೀಡುವುದಾಗಿ ತಿಳಿಸಿದರು.

ಕಾಂಗ್ರೆಸ್ ನಾಯಕರ ದೇವಸ್ಥಾನ ಭೇಟಿ ನಕಲಿ ಹಿಂದುತ್ವವಾದ ಹಿಂದೆ ಕೇವಲ ಚರ್ಚ್ ಹಾಗೂ ಮಸೀದಿಗಳಿಗೆ ಮಾತ್ರ ಭೇಟಿ ನೀಡುತ್ತಿದ್ದರೂ ಚುನಾವಣೆ ಸಂದರ್ಭದಲ್ಲಿ ಇದೀಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಾ ನಕಲಿ ಹಿಂದುತ್ವ ವಾದ ಮಾಡತೊಡಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ತನ್ನ ನೂರಾ ಐವತ್ತು ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕೆಲವರಿಗೆ ಟಿಕೆಟ್ ಸಿಗದೆ ಬೇಸರವಾಗಿರುವುದು ನಿಜ. ಅತೃಪ್ತರನ್ನು ಕರೆದು ಮಾತನಾಡಿಸಿ ಎಲ್ಲವನ್ನೂ ಸರಿಪಡಿಸುತ್ತೇವೆ ಎಂದರು.

ಸಾಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಗೋಪಾಲಕೃಷ್ಣ ಬೇಳೂರು ಅವರು ಟಿಕೆಟ್ ಸಿಗದಿದ್ದಕ್ಕೆ ಅತೃಪ್ತರಾಗಿದ್ದಾರೆ. ಅವರು ತಮ್ಮನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ದುಡುಕಿನಿಂದ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಸಲಹೆ ನೀಡಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸೊಗಡು ಶಿವಣ್ಣ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ. ವಿಚಾರ ಸಿದ್ಧಾಂತವನ್ನು ಒಪ್ಪಿಕೊಂಡು ನಾವೆಲ್ಲರೂ ಬಿಜೆಪಿಯಲ್ಲಿದ್ದೇವೆ. ಅತೃಪ್ತರಾಗಿರುವವರನ್ನು ಸಮಾಧಾನ ಮಾಡುವ ಪ್ರಯತ್ನ ನಡೆಸುತ್ತೇವೆ ಎಂದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...