alex Certify
ಕನ್ನಡ ದುನಿಯಾ       Mobile App
       

Kannada Duniya

ನೀರಾವರಿ ಸಭೆಯಲ್ಲೂ ‘ಆಪರೇಷನ್ ಕಮಲ’ದ ಮಾತು

ಸದ್ಯ ರಾಜ್ಯ ರಾಜಕಾರಣದಲ್ಲಿ ‘ಆಪರೇಷನ್ ಕಮಲ’ದ ಕುರಿತು ಚರ್ಚೆ ನಡೆಯುತ್ತಿದೆ. ದೋಸ್ತಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವ ಕೆಲ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರುಗಳು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ.

ಇದರ ಮಧ್ಯೆ ವಿಧಾನಸೌಧದಲ್ಲಿ ಇಂದು ನಡೆದ ನೀರಾವರಿ ವಿಚಾರ ಕುರಿತ ಸಭೆಯಲ್ಲೂ ‘ಆಪರೇಷನ್ ಕಮಲ’ದ ಕುರಿತ ಮಾತು ಪ್ರಸ್ತಾಪವಾಗಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕ ಕೆ.ಎಸ್. ಈಶ್ವರಪ್ಪ ತಮ್ಮ ಜೊತೆಗಿದ್ದ ಕಾಂಗ್ರೆಸ್ ಶಾಸಕರುಗಳಾದ ಎಚ್.ಕೆ. ಪಾಟೀಲ್ ಹಾಗೂ ಎಂ.ಬಿ. ಪಾಟೀಲ್ ಅವರುಗಳ ಜೊತೆ ಈಶ್ವರಪ್ಪ ಮಾತನಾಡುವ ವೇಳೆ ಸಚಿವ ಡಿ.ಕೆ. ಶಿವಕುಮಾರ್ ಇದನ್ನು ಪ್ರಸ್ತಾಪಿಸಿದ್ದಾರೆ.

ಈಶ್ವರಪ್ಪ, ಎಂ.ಬಿ. ಪಾಟೀಲ್ ಹಾಗೂ ಹೆಚ್.ಕೆ. ಪಾಟೀಲ್ ಅವರುಗಳ ನಡುವಿನ ಮಾತುಕತೆಯನ್ನು ಗಮನಿಸಿದ ಡಿ.ಕೆ. ಶಿವಕುಮಾರ್, ಏನು ಅವರುಗಳನ್ನು ಕರೆಯಲು ನೋಡುತ್ತಿದ್ದೀರಾ ಎಂದು ಈಶ್ವರಪ್ಪರನ್ನು ಕಿಚಾಯಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಈಶ್ವರಪ್ಪ 1 ಪರ್ಸೆಂಟ್ ಆದರೂ ಸಾಧ್ಯವಾಗುತ್ತಾ ಎಂದು ಪ್ರಶ್ನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...