alex Certify
ಕನ್ನಡ ದುನಿಯಾ       Mobile App
       

Kannada Duniya

ಯಡಿಯೂರಪ್ಪ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದರ ಕುರಿತು ಅವರನ್ನೇ ಕೇಳಿ ಎಂದ ಈಶ್ವರಪ್ಪ

ಶಿವಮೊಗ್ಗ ನಗರ ಸೇರಿದಂತೆ ರಾಜ್ಯದ ಯಾವುದೇ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಇನ್ನೂ ಘೋಷಣೆ ಮಾಡಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಪತ್ರಿಕಾಗೋಷ್ಟಿ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಬಿಜೆಪಿಯಲ್ಲೂ ಕೂಡ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಿರಬಹುದು. ಆದರೆ ಎಲ್ಲಿಯೂ ಘೋಷಣೆ ಮಾಡಿಲ್ಲ. ಅಕಸ್ಮಾತ್ ಘೋಷಣೆ ಮಾಡಿದ್ದರೆ ಅದು ಸಿಂಧು ಆಗುವುದಿಲ್ಲ ಎಂದರು,

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಕೆಲವು ಕಡೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಗೆಲ್ಲಿಸಲು ಮನವಿ ಮಾಡಿರುವುದು ತಮಗೆ ಗೊತ್ತಿಲ್ಲ. ಈ ಬಗ್ಗೆ ತಾವು ಅವರನ್ನೇ ಕೇಳಿ ಎನ್ನುವ ಮೂಲಕ ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿಯಿಂದ ತಮಗೆ ಟಿಕೆಟ್ ಸಿಗುವುದು ಖಚಿತ ಎಂದು ಪರೋಕ್ಷವಾಗಿ ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...