alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯ ಸರ್ಕಾರದ ವಿರುದ್ದ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ರಾಜ್ಯದ ಖಜಾನೆ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜನರಿಗೆ ಮಾಹಿತಿ ನೀಡಬೇಕು. ಆರ್ಥಿಕ ಸ್ಥಿತಿಗೆ ಸಂಬಂಧಿಸಿದಂತೆ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗೊಂದಲ ತಂದುಕೊಂಡಿದೆ. ಸರಿಯಾಗಿ ಹಣ ಇಟ್ಟುಕೊಳ್ಳದೇ ಸಾರ್ವಜನಿಕರ ಮೇಲೆ ಬರೆ ಎಳೆಯಲಾಗಿದೆ. ಪೆಟ್ರೋಲ್, ಡೀಸೆಲ್ ಮುಂತಾದ ಬೆಲೆಗಳನ್ನು ಹೆಚ್ಚಿಸಲಾಗಿದೆ. ಅತ್ತೆಯದನ್ನು ತೆಗೆದು ಅಳಿಯನಿಗೆ ಕೊಟ್ಟಂತಾಗಿದೆ ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿಯವರಿಗೆ ಬಜೆಟ್ ನ ಕಲ್ಪನೆಯೇ ಇಲ್ಲ. ಆ ಮಹತ್ವವೂ ಅವರಿಗೆ ಗೊತ್ತಿಲ್ಲ. ಜನರಿಗೆ ಭಾರ ಮಾಡುವುದೇ ಅವರ ಗುರಿಯಾಗಿದೆ. ರಾಜ್ಯದ ಆರ್ಥಿಕ ಸ್ಥಿತಿ ನಿಭಾಯಿಸುವಲ್ಲಿ ಅವರು ಸಂಪೂರ್ಣ ವಿಫಲರಾಗಿದ್ದಾರೆ. ಏನೋ ಮಾಡಲು ಹೋಗಿ ಏನೋ ಮಾಡಿದ್ದಾರೆ. ಹಾಗಾಗಿ ರಾಜ್ಯದ ಆರ್ಥಿಕ ಸ್ಥಿತಿ ಬಗ್ಗೆ ರಾಜ್ಯದ ಜನತೆಗೆ ಗೊತ್ತಾಗಬೇಕು. ಹಾಗಾಗಿ ಶ್ವೇತ ಪತ್ರ ಹೊರಡಿಸಬೇಕೆಂದು ಆಗ್ರಹಿಸಿದರು.

ಸಿದ್ದರಾಮಯ್ಯನವರಿಗೆ ಪತ್ರ ಬರೆಯುವುದು ಬಿಟ್ಟು ಬೇರೆ ಏನೂ ಗೊತ್ತಿಲ್ಲ. ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಅವರು ಒಬ್ಬ ಗುಮಾಸ್ತರಂತೆ ನಡೆದುಕೊಳ್ಳುತ್ತಿದ್ದಾರೆ. ಸರ್ಕಾರವನ್ನು ಎದುರಿಸುವ ಶಕ್ತಿಯೇ ಅವರಿಗೆ ಇಲ್ಲವಾಗಿದೆ. ನಿಭಾಯಿಸಲು ಬರುವುದಿಲ್ಲ. ಅವರೊಬ್ಬ ನಾಟಕ ಮಾಡುವ ನಟನಾಗಿದ್ದಾರೆ ಅಷ್ಟೆ. ಜನರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಯಾವುದೇ ಸಮಸ್ಯೆಗಳು ಪತ್ರ ಬರೆದರೆ ಬಗೆಹರಿಯುವುದಿಲ್ಲ. ಇವರೊಬ್ಬ ಪತ್ರ ಸಿದ್ದರಾಮಯ್ಯ ಆಗಿದ್ದಾರೆ ಅಷ್ಟೆ ಎಂದು ಟೀಕಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...