alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಗೋಡು ಹೇಳಿಕೆಗೆ ಈಶ್ವರಪ್ಪ ತಿರುಗೇಟು

ಹಿಂದೂ ಧರ್ಮ ಧರ್ಮವೇ ಅಲ್ಲ ಎಂಬ ಸಚಿವ ಕಾಗೋಡು ತಿಮ್ಮಪ್ಪರ ಹೇಳಿಕೆಗೆ ತಿರುಗೇಟು ನೀಡಿರುವ ವಿರೋಧ ಪಕ್ಷದ  ನಾಯಕ ಕೆ.ಎಸ್.ಈಶ್ವರಪ್ಪ, ಧರ್ಮದ ವಿಚಾರದಲ್ಲಿ ಪ್ರತಿಭೆ ಪ್ರದರ್ಶನ ನೀಡುವ ಅವಶ್ಯಕತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ಧರ್ಮದ ಕುರಿತು ಮಾತನಾಡುವ ಅಧಿಕಾರ ಕಾಗೋಡು ತಿಮ್ಮಪ್ಪರಿಗಿಲ್ಲ. ಕೀಳಾಗಿ ಹೇಳಿಕೆ ನೀಡಿದ್ದಕ್ಕೆ ಜನತೆಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಹಿಂದೂ ಧರ್ಮವೇ ಎಂಬುದರ ಕುರಿತು ಕಾಗೋಡು ತಮ್ಮ ಹೆಂಡತಿ , ಮಕ್ಕಳನ್ನು ಪ್ರಶ್ನಿಸಲಿ ಅವರು ಸರಿಯಾದ ಉತ್ತರ ನೀಡುತ್ತಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುತ್ತಾರೆಂಬ ಹೇಳಿಕೆಯನ್ನು ಕೇವಲ ಮಾಧ್ಯಮಗಳಲ್ಲಷ್ಟೇ ಕೇಳಲ್ಪಟ್ಟಿದ್ಧೇನೆ. ಈ ಬಗ್ಗೆ  ಹೆಚ್ಚಿನ ಮಾಹಿತಿ ಇಲ್ಲ ಎಂದರು.

ಇಡೀ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಅವರನ್ನು ಗೆಲ್ಲಿಸಿಕೊಳ್ಳುವ ವಿಶ್ವಾಸ ನಮಗಿದೆ. ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ. ಸೂಕ್ತವಾದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ. ಈ ಕುರಿತು ಕೇಂದ್ರ ಹಾಗೂ ರಾಜ್ಯ ನಾಯಕರು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪವನ್ನು ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ದ ಕೆಲವರು ಹೊರಿಸುತ್ತಿದ್ದರು. ಅವರಿಗೆ ತಿಂದ ಅನ್ನ ಕರಗುತ್ತಿರಲಿಲ್ಲ. ತನಿಖೆ ನಡೆಸುವ ಮೊದಲೇ ಕೆಲವರು ತೀರ್ಪು ನೀಡುತ್ತಿದ್ದರು. ಇದೀಗ ಅವರ ಯೋಚನೆ ಬದಲಾಗಿದೆ. ನಕ್ಸಲೈಟರ ಕೃತ್ಯ ಎಂಬ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.

ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ದ ಆರೋಪ ಮಾಡುವುದು ಸರಿಯಲ್ಲ. ಒಂದು ವೇಳೆ ತನಿಖೆ ನಂತರ ಪ್ರಕರಣದಲ್ಲಿ ಆರ್ ಎಸ್ ಎಸ್ ಪಾತ್ರವಿಲ್ಲ ಎಂಬ ತೀರ್ಪು ಬಂದರೆ ಜನತೆಗೆ ಏನು ಉತ್ತರ ಕೊಡುತ್ತಾರೆ. ಕ್ಷಮೆ ಕೇಳಿದರೆ ಎಲ್ಲವೂ ಮುಗಿದುಹೋಗುವುದಿಲ್ಲ. ಸತ್ಯಾಂಶ ಹೊರ ಬಂದ ನಂತರ ಎಲ್ಲರ ಬಂಡವಾಳ ಹೊರಬರುತ್ತದೆ ಎಂದ ಮಾರ್ಮಿಕವಾಗಿ ನುಡಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...