alex Certify
ಕನ್ನಡ ದುನಿಯಾ       Mobile App
       

Kannada Duniya

ಅತೃಪ್ತ ಶಾಸಕರಿಗೆ ಬಹಿರಂಗ ಆಹ್ವಾನ ನೀಡಿದ ಈಶ್ವರಪ್ಪ

ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ ಶಾಸಕರುಗಳೇ ಆ ಪಕ್ಷದ ಕುರಿತು ನಿರಾಶೆ ವ್ಯಕ್ತಪಡಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಕಾಂಗ್ರೆಸ್ ಪಕ್ಷವನ್ನ ಮಾರಲು ಹೊರಟಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ಬೆತ್ತಲುಗೊಂಡಿದೆ. ಆ ಪಕ್ಷದಲ್ಲಿನ ಬೇಸರ, ನಿರಾಶೆ ಹೊರಬರತೊಡಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ದೇಶದ 22 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಮುಕ್ತವಾಗಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತವಾಗಲಿದೆ. ಈಗಾಗಲೇ ಸಂಪುಟದಲ್ಲಿ ಸ್ಥಾನ ಸಿಗದ ಹಲವು ಶಾಸಕರು ತಮ್ಮ ನಿರ್ಧಾರವನ್ನು ಸದ್ಯದಲ್ಲೇ ಪ್ರಕಟ ಮಾಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡತೊಡಗಿದ್ದಾರೆ. ಪ್ರಾಮಾಣಿಕ ಶಾಸಕರುಗಳು ದೇಶ ಹಾಗೂ ರಾಜ್ಯದ ಹಿತದೃಷ್ಟಿಯಿಂದ ನರೇಂದ್ರ ಮೋದಿ ನೇತೃತ್ವಕ್ಕೆ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.

ಬಿಜೆಪಿ 104 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಸಂದರ್ಭದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕೆಂದು ಅನೇಕ ಶಾಸಕರು ಬಿಜೆಪಿಯೊಂದಿಗೆ ಚರ್ಚೆ ನಡೆಸಿದ್ದರು. ಅವರಲ್ಲಿ ಹಲವರಿಗೆ ಸಂಪುಟದಲ್ಲಿ ಸ್ಥಾನ ಸಿಗದ ಕಾರಣ ನಿರಾಶೆಗೊಂಡಿದ್ದಾರೆ. ಬೇಸರಗೊಂಡಿರುವವರು ಕಾಂಗ್ರೆಸ್ಸನ್ನು ತಿರಸ್ಕಾರ ಮಾಡಿ ಬಿಜೆಪಿಗೆ ಬೆಂಬಲ ನೀಡುವಂತೆ ಕೋರಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...