alex Certify
ಕನ್ನಡ ದುನಿಯಾ       Mobile App
       

Kannada Duniya

ಪರಿಷತ್ ನಲ್ಲಿ ಸಿದ್ದರಾಮಯ್ಯ-ಈಶ್ವರಪ್ಪ ವಾಕ್ಸಾಮರ

Chief Minister Siddaramaiah and Opposition leader in the council KS Eshwarappa speak at the council during monsoon sessions at Suvarna Vidhana Soudha in Belagavi on Tuesday, June 30, 2015. - KPN ### Belagavi: CM at Councilಬರ ಪರಿಸ್ಥಿತಿಯ ಕುರಿತು ಚರ್ಚೆಗೆ ಆಗ್ರಹಿಸಿ ವಿಧಾನ ಪರಿಷತ್ ನಲ್ಲಿ ವಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಮಾತನಾಡಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಈಶ್ವರಪ್ಪನವರ ನಡುವೆ ವಾಕ್ಸಾಮರ ನಡೆದಿದೆ.

ಬರ ಪರಿಸ್ಥಿತಿ ನಿಭಾಯಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಈಶ್ವರಪ್ಪ ಈ ಕುರಿತು ಸಮಗ್ರ ಚರ್ಚೆ ನಡೆಸುವಂತೆ ಆಗ್ರಹಿಸಿದರಲ್ಲದೇ ಚರ್ಚೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಹಾಜರಿಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಸ್ಟ್ ಸೀನಿಯರ್ ಮಿನಿಸ್ಟರ್ ಕಾಗೋಡು ತಿಮ್ಮಪ್ಪನವರು ಹಾಜರಿರುತ್ತಾರೆ ಎಂದು ಹೇಳಿದರು. ಇದಕ್ಕೆ ಟಾಂಗ್ ಕೊಟ್ಟ ಈಶ್ವರಪ್ಪ, ಕಾಗೋಡು ತಿಮ್ಮಪ್ಪ ಸ್ಪೀಕರ್ ಆಗಿದ್ದರೆ ನಿಮ್ಮ ಸರ್ಕಾರವನ್ನು ತೊಳೆದು ಹಾಕುತ್ತಿದ್ದರು. ಹಾಗಾಗೇ ಅವರನ್ನು ಮಂತ್ರಿ ಮಾಡಿದ್ದೀರಿ ಎಂದರು.

ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ 3.5 ಸಾವಿರ ಕೋಟಿ ರೂ. ಸಾಲ ಮಾಡಿದ್ದರು. ಅದನ್ನು ನಾವು ತೀರಿಸಿದ್ದೇವೆ ಎಂದು ಸಿದ್ದರಾಮಯ್ಯನವರು ಹೇಳಿದಾಗ ಈಗ ನೀವು ಸಾಲ ಮಾಡಿ ಮುಂದೆ ನಾವು ಸಾಲ ತೀರಿಸುತ್ತೇವೆ ಎಂದು ಈಶ್ವರಪ್ಪ ಹೇಳಿದರು. ಅದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದೀರಿ. ನಂಜನಗೂಡು, ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆ ಮುಂಬರುವ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಹೇಳುತ್ತಿದ್ದೀರಿ. ಚುನಾವಣೆಯಲ್ಲಿ ಏನಾಯಿತು ಎಂದು ಗೊತ್ತಾಯಿತಲ್ಲ ಎಂದು ವ್ಯಂಗ್ಯವಾಡಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...