alex Certify
ಕನ್ನಡ ದುನಿಯಾ       Mobile App
       

Kannada Duniya

‘ಸ್ಪರ್ಧಿಸುವ ಎರಡೂ ಕ್ಷೇತ್ರದಲ್ಲೂ ಸಿದ್ದರಾಮಯ್ಯಗೆ ಸೋಲು’

ರಾಜ್ಯದ ಜನತೆಗೆ ಅನ್ಯಾಯ ಎಸಗಿದ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಶಿವಮೊಗ್ಗ ನಗರದ ಎನ್ಡಿವಿ ಹಾಸ್ಟೆಲ್ ಆವರಣದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದ ವರ್ಗದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಯಾವುದೇ ಕೊಡುಗೆ ನೀಡಲಿಲ್ಲ. ಮೀಸಲಿಟ್ಟ ಅನುದಾನವನ್ನು ಸಮರ್ಪಕವಾಗಿ ಖರ್ಚು ಮಾಡದೇ ಆ ವರ್ಗಗಳಿಗೆ ದ್ರೋಹ ಬಗೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದ ವರ್ಗಗಳಿಗೆ ನೀಡಿರುವ ಕೊಡುಗೆ ಏನೆಂಬುದರ ಕುರಿತು ಶ್ವೇತಪತ್ರ ಹೊರಡಿಸಲಿ. ಬಿಜೆಪಿ ತನ್ನ ಅವಧಿಯಲ್ಲಿ ಕೈಗೊಂಡ ಕಾರ್ಯಕ್ರಮಗಳ ಪಟ್ಟಿ ನೀಡಲು ಸಿದ್ದವಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಭಯ ಕಾಡತೊಡಗಿದೆ. ಹೀಗಾಗಿ ಬಾದಾಮಿ ಕ್ಷೇತ್ರ ಹುಡುಕಿಕೊಂಡು ಹೊರಟಿದ್ದಾರೆ. ಅಲ್ಲೂ ಸೋಲನುಭವಿಸುವುದು ಖಚಿತ. ಕೇವಲ ಚಾಮುಂಡೇಶ್ವರಿ, ಬಾದಾಮಿ ಕ್ಷೇತ್ರವಲ್ಲ ರಾಜ್ಯದ 224 ಕ್ಷೇತ್ರಗಳಲ್ಲಿ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಿದರೂ ಸಿದ್ದರಾಮಯ್ಯ ಸೋಲು ಕಾಣಲಿದ್ಧಾರೆ ಎಂದು ಛೇಡಿಸಿದರು.

ರಾಜ್ಯದ ಜನತೆ ಸರ್ಕಾರದ ಆಡಳಿತ ಕಂಡು ಬೇಸತ್ತು ಹೋಗಿದ್ಧಾರೆ. ಗೋವುಗಳ ಹತ್ಯೆ ತಡೆಗಟ್ಟಲು ಕಠಿಣ ಕ್ರಮಕೈಗೊಳ್ಳಲಿಲ್ಲ. ಹೆಣ್ಣುಮಕ್ಕಳ ಮೇಲೆ ನಿರಂತರವಾಗಿ ರಾಜ್ಯದಲ್ಲಿ ಅತ್ಯಾಚಾರ ಪ್ರಕರಣ ನಡೆಯುತ್ತಿದೆ. ಇದಕ್ಕೂ ಕಠಿಣ ಕಾನೂನು ರೂಪಿಸಲಿಲ್ಲ ಎಂದು ದೂರಿದರು.

ಕಳೆದ ಚುನಾವಣೆಯಲ್ಲಿ ನಾವು ತಪ್ಪು ಮಾಡಿ ಬುದ್ದಿ ಕಲಿತಿದ್ದೇವೆ. ಜನತೆ ನಮಗೆ ನೀಡಿದ್ದ ಶಿಕ್ಷೆ ಸಾಕು. ಅದನ್ನು ಅನುಭವಿಸಿದ್ದೇವೆ. ಮುಂದೆ ಯಾವುದೇ ಕಾರಣಕ್ಕೂ ಬಿಜೆಪಿಯಲ್ಲಿ ಒಡಕು ಕಾಣುವುದಿಲ್ಲ. ಏಕತೆಯಿಂದ ರಾಜ್ಯದ ಅಭಿವೃದ್ದಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.

ರಾಜ್ಯದೆಲ್ಲೆಡೆ ಬಿಜೆಪಿ ಪರವಾದ ಅಲೆ ಕಂಡುಬಂದಿದೆ. ಈಗಾಗಲೇ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಜನ ತೀರ್ಮಾನಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗುವುದು ಖಚಿತ. ಜೊತೆಗೆ 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲೂ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ಮತ್ತೆ ಎರಡನೇ ಬಾರಿಗೆ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...