alex Certify
ಕನ್ನಡ ದುನಿಯಾ       Mobile App
       

Kannada Duniya

ಅತೃಪ್ತ ಶಾಸಕರ ಕುರಿತು ಹೊಸ ಬಾಂಬ್ ಸಿಡಿಸಿದ ಈಶ್ವರಪ್ಪ

ಶಿವಮೊಗ್ಗ: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ರಚನೆಯಲ್ಲಿ ಮಂತ್ರಿ ಸ್ಥಾನ ಸಿಗದೇ ಹಲವು ಶಾಸಕರು ಅತೃಪ್ತಿಯನ್ನು ಹೊರ ಹಾಕಿದ್ದು, ಈ ಸರ್ಕಾರ ಹೆಚ್ಚು ದಿನ ಆಡಳಿತದಲ್ಲಿ ಇರುವುದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರಲ್ಲದೇ ಹಲವು ಅತೃಪ್ತ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಇಂದು ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ಸಚಿವ ಸ್ಥಾನ ಸಿಗದ ಕಾರಣ ನಿರಾಶರಾಗಿದ್ದಾರೆ. ಇದು ಸಮ್ಮಿಶ್ರ ಸರ್ಕಾರವಲ್ಲ. ಬದಲಿಗೆ ಅತೃಪ್ತರ ಸರ್ಕಾರವಾಗಿದೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಪಕ್ಷದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಹಲವು ನಾಯಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಕೇವಲ ವೀರಶೈವ, ಲಿಂಗಾಯಿತ ಹಾಗೂ ಕುರುಬ ಸಮಾಜಕ್ಕೆ ಮಾತ್ರವಲ್ಲದೇ ಯಾವುದೇ ಜಾತಿಗೂ ಸಂಪುಟದಲ್ಲಿ ಸರಿಯಾಗಿ ಅವಕಾಶ ನೀಡಿಲ್ಲ ಎಂದು ಆರೋಪಿಸಿದರು.

ಮೈತ್ರಿ ಸರ್ಕಾರದಲ್ಲಿನ ಅತೃಪ್ತ ಶಾಸಕರಲ್ಲಿ ಹಲವರು ಬಿಜೆಪಿಯನ್ನು ಸಂಪರ್ಕಿಸುತ್ತಿದ್ದಾರೆ. ಆ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಆಡಳಿತ ಸರ್ಕಾರ ಇಲ್ಲವಾಗಿದೆ. ಅಧಿಕಾರಿಗಳಿಂದ ಸರ್ಕಾರ ನಡೆಯುತ್ತಿದೆ ಎಂದು ಆರೋಪಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...