alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಎಸ್. ಈಶ್ವರಪ್ಪರಿಂದ ಶಿವಮೊಗ್ಗದಲ್ಲಿ ‘ಟೆಂಪಲ್ ರನ್’

ಶಿವಮೊಗ್ಗ : ವಿಧಾನಸಭಾ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೆ.ಎಸ್. ಈಶ್ವರಪ್ಪ, ತಮ್ಮ ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಬಾಕಿ ಇರುವಾಗಲೇ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಇಂದು ಬೆಳಿಗ್ಗೆಯಿಂದಲೇ ನಗರದ ವಿವಿಧ ವಾರ್ಡ್ ಗಳಲ್ಲಿರುವ ದೇವಸ್ಥಾನಗಳಿಗೆ ಭೇಟಿ ನೀಡಿದರು. ರಾಜೇಂದ್ರ ನಗರದಲ್ಲಿರುವ ಶ್ರೀ ಪ್ರಸನ್ನಗಣಪತಿ ದೇವಾಲಯ, ವಿನೋಬನಗರದ ಈಶ್ವರ ದೇವಾಲಯ, ಶುಭ ಮಂಗಳದ ಶ್ರೀ ಶನೇಶ್ಚರ ದೇವಾಲಯ ಸೇರಿದಂತೆ ನಗರದ 14 ಕ್ಕೂ ಹೆಚ್ಚು ದೇವಾಲಯಗಳಿಗೆ ಭೇಟಿ ನೀಡಿದರು.

ಮತದಾರರನ್ನು ಸೆಳೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಂತೆಯೇ ಕೆ.ಎಸ್. ಈಶ್ವರಪ್ಪ ಕೂಡ ಟೆಂಪಲ್ ರನ್ ಪ್ರಾರಂಭಿಸಿದ್ದಾರೆ. ಅವರ ದೇವಸ್ಥಾನ ಭೇಟಿ ನಾಳೆಯೂ ಮುಂದುವರೆಯಲಿದ್ದು, ಶಿವಮೊಗ್ಗ ನಗರದ 35 ವಾರ್ಡ್ ಗಳಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...