alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಸಕ್ತ ರಾಜಕೀಯ ಬೆಳವಣಿಗಳ ಬಗ್ಗೆ ಮಾಹಿತಿಯೇ ಇಲ್ಲ ಅಂದ್ರು ಮಾಜಿ ಸಿಎಂ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 12 ದಿನಗಳ ಯುರೋಪ್ ಪ್ರವಾಸ ಮುಗಿಸಿ ರಾಜ್ಯಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿದ್ದರಾಮಯ್ಯ, ತಮಗೆ ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಯಾವುದೇ ರಾಜಕೀಯ ವಿದ್ಯಾಮಾನಗಳ ಬಗ್ಗೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಜಾರಕಿಹೊಳಿ ಸಹೋದರರ ವಿಚಾರದ ಬಗ್ಗೆಯಾಗಲಿ, ಬಿಜೆಪಿ ಆಪರೇಷನ್ ಕಮಲದ ಮೂಲಕ ಶಾಸಕರ ಸೆಳೆಯಲು ಮುಂದಾಗಿರುವ ವಿಚಾರವಾಗಲಿ ಯಾವುದರ ಬಗ್ಗೆಯೂ ನನಗೆ ಮಾಹಿತಿ ಇಲ್ಲ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಯಾವಾಗಲೂ ಸುಳ್ಳು ಹೇಳಿಕೆಗಳನ್ನು ನೀಡುತ್ತಾರೆ. ಅಗತ್ಯ ಬಿದ್ದರೆ ಸಮನ್ವಯ ಸಮಿತಿ ಕರೆದು ಚರ್ಚೆ ನಡೆಸುತ್ತೇವೆ ಎಂದಿದ್ದಾರೆ.

ಇನ್ನು ವಿದೇಶ ಪ್ರವಾಸ ತುಂಬಾ ಚೆನ್ನಾಗಿತ್ತು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಇಂದು ಸಿದ್ದರಾಮಯ್ಯನವರನ್ನು ಭೇಟಿಯಾಗಲಿದ್ದು, ಪ್ರಸ್ತುತ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...