alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂದಿನ ಹೇಳಿಕೆಗೆ ಬದ್ದ ಅಂದ್ರು ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇದು ನನ್ನ ಕೊನೆ ಚುನಾವಣೆ, ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸಲ್ಲ ಎಂದು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹೇಳಿಕೆ ನೀಡಿದ್ದ ಸಿದ್ದರಾಮಯ್ಯ, ತಮ್ಮ ಆ ಹೇಳಿಕೆಗೆ ಬದ್ಧರಾಗಿರುವುದಾಗಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಸಮನ್ವಯ ಸಮಿತಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದರಾಮಯ್ಯ, ಜನ ಆಶೀರ್ವಾದ ಮಾಡಿದರೆ ಮತ್ತೆ ಸಿಎಂ ಆಗುತ್ತೇನೆಂದು ಹೇಳಿದ್ದೇನೆ ಹೊರತು ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿಲ್ಲ. ಈಗಿರುವ ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ. ಅದರಲ್ಲಿ ಸಂಶಯ ಬೇಡ. ಐದು ವರ್ಷದ ಬಳಿಕ ಜನರಿಗೆ ನಾನು ಬೇಕೆಂದರೆ ಮತ್ತೆ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೆ ಎಂದರು.

ಇನ್ನು ಸರ್ಕಾರದ ಕುರಿತಾಗಿ ಹಾಗೂ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾಧ್ಯಮಗಳ ವರದಿ ಕೇವಲ ಊಹಾಪೋಹ ಹಾಗೂ ವದಂತಿಗಳಷ್ಟೆ. ಸಮ್ಮಿಶ್ರ ಸರ್ಕಾರ ಸರಿಯಾದ ದಿಕ್ಕಿನಲ್ಲಿಯೇ ಸಾಗುತ್ತಿದೆ. ಸಾಲಮನ್ನಾ ಮಹತ್ವದ ತೀರ್ಮಾನವಾಗಿದ್ದು, ಅದು ಎರಡೂ ಪಕ್ಷಗಳು ಚರ್ಚಿಸಿಯೇ ಕೈಗೊಂಡ ನಿರ್ಧಾರವಾಗಿದೆ. ಇನ್ನು ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳೂ ಸಮ್ಮಿಶ್ರ ಸರ್ಕಾರದಲ್ಲಿ ಮುಂದುವರೆಯಲಿದೆ ಎಂದು ತಿಳಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...