alex Certify ಮೊದಲ ದಿನ SSLC ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊದಲ ದಿನ SSLC ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳೆಷ್ಟು ಗೊತ್ತಾ…?

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಮೊದಲ ದಿನವೇ ಅನಾರೋಗ್ಯ ಮತ್ತಿತರ ಕಾರಣಗಳಿಂದ 20,994 ಮಕ್ಕಳು ಗೈರು ಹಾಜರಾಗಿದ್ದಾರೆ.

8,69,399 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಬೇಕಿತ್ತು. ಕಳೆದ ವರ್ಷ 3769 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದರು. ಮೊದಲ ದಿನದ ಪರೀಕ್ಷೆಯ ವೇಳೆ ಯಾವುದೇ ನಕಲು ಕೇಸ್ ವರದಿಯಾಗಿಲ್ಲ. ಯಾವುದೇ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ಬಂದಿಲ್ಲ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯಿಂದ ಮಾಹಿತಿ ನೀಡಲಾಗಿದೆ.

ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ನಡೆದಿದ್ದು, 8,48,405 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇವರಲ್ಲಿ 1701 ಪುನರಾವರ್ತಿತ ಅಭ್ಯರ್ಥಿಗಳು 35,509 ಖಾಸಗಿ ಅಭ್ಯರ್ಥಿಗಳು ಹಾಗೂ 8,11,195 ಮೊದಲ ಬಾರಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಸೇರಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ 336 ವಿದ್ಯಾರ್ಥಿಗಳು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...