alex Certify
ಕನ್ನಡ ದುನಿಯಾ       Mobile App
       

Kannada Duniya

ಡಿವೈಎಸ್ಪಿ ಆತ್ಮಹತ್ಯೆ: ಇನ್ನೂ ದಾಖಲಾಗದ ಎಫ್ಐಆರ್

ganapathi_647ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರಿನ ಐ.ಜಿ. ಕಚೇರಿಯ ಡಿ.ವೈ.ಎಸ್ಪಿ., ಎಂ.ಕೆ. ಗಣಪತಿ ಅವರ ಪ್ರಕರಣದಲ್ಲಿ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಡಿಕೇರಿ ಜೆ.ಎಂ.ಎಫ್.ಸಿ. ನ್ಯಾಯಾಲಯ ಆದೇಶಿಸಿದ್ದರೂ ಮಡಿಕೇರಿ ಟೌನ್ ಪೊಲೀಸ್ ಠಾಣೆಯಲ್ಲಿ ಇನ್ನೂ ಎಫ್ಐಆರ್ ದಾಖಲಾಗಿಲ್ಲವೆಂದು ತಿಳಿದು ಬಂದಿದೆ.

ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪ್ರಕರಣದಲ್ಲಿ ಕೇಳಿ ಬಂದಿದ್ದ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳಾದ ಎ.ಎಂ. ಪ್ರಸಾದ್ ಹಾಗೂ ಪ್ರಣಬ್ ಮೊಹಾಂತಿಯವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಆದರೆ ಮಡಿಕೇರಿ ಟೌನ್ ಪೊಲೀಸರು ಮಾತ್ರ ಎಫ್ಐಆರ್ ದಾಖಲಿಸಲು ಇನ್ನೂ ಮೀನಾಮೇಷ ಎಣಿಸುತ್ತಿದ್ದಾರೆನ್ನಲಾಗುತ್ತಿದ್ದು, ಹಿರಿಯ ಅಧಿಕಾರಿಗಳ ಅನುಮತಿಗೆ ಕಾಯುತ್ತಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ ಸಿ.ಐ.ಡಿ. ಅಧಿಕಾರಿಗಳೂ ಪ್ರಕರಣದ ವಿಚಾರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಸರ್ಕಾರದ ಅನುಮತಿಯನ್ನು ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಸಿ.ಬಿ.ಐ. ತನಿಖೆಗೆ ಪಟ್ಟು ಹಿಡಿದಿರುವ ಬಿ.ಜೆ.ಪಿ. ನವದೆಹಲಿಯಲ್ಲಿಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಧರಣಿ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...