alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಕುಮಾರಸ್ವಾಮಿಯವರ ರಾಜೀನಾಮೆ ಕೇಳಿದ ಪೊಲೀಸ್ ಪೇದೆ

ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನದಿಂದಲೇ ವಿರೋಧ ಪಕ್ಷ ಬಿಜೆಪಿ ರಾಜೀನಾಮೆ ಕೇಳುತ್ತಿದೆ. ಅದು ಸಹಜವೂ ಹೌದು.

ಆದರೆ ಪೊಲೀಸ್ ಪೇದೆಯೊಬ್ಬರು ಕುಮಾರಸ್ವಾಮಿಯವರ ರಾಜಿನಾಮೆ ಕೇಳಿದರೆ….! ಹೌದು, ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯ ಪೇದೆ ಅರುಣ್ ಡೊಳ್ಳಿನ್ ಎಂಬವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಕುಮಾರಸ್ವಾಮಿಯವರೇ ರಾಜೀನಾಮೆ ಯಾವಾಗ ಎಂಬ ಪೋಸ್ಟ್ ಹಾಕಿದ್ದಾರೆ.

ಬಿಜೆಪಿ ಫೇಸ್ ಬುಕ್ ಪೋಸ್ಟನ್ನು ಅರುಣ್ ಡೊಳ್ಳಿನ್ ಶೇರ್ ಮಾಡಿದ್ದು, ಇದರಲ್ಲಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರ ರಚನೆಯಾಗಿ 18 ದಿನಗಳಾದರೂ ರಾಜ್ಯದ ರೈತರ ಸಾಲ ಮನ್ನಾ ಆಗಲಿಲ್ಲ. ಕುಮಾರಸ್ವಾಮಿ ಯವರೇ ರಾಜೀನಾಮೆ ಯಾವಾಗ ಎಂದು ಪ್ರಶ್ನಿಸಲಾಗಿದೆ.

ಸರ್ಕಾರಿ ನೌಕರರಾಗಿರುವ ಅರುಣ್ ರಾಜಕೀಯ ಪಕ್ಷವೊಂದರ ಕಾರ್ಯಕರ್ತರಂತೆ ಈ ಪೋಸ್ಟ್ ಶೇರ್ ಮಾಡಿರುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಅರುಣ್ ಅವರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...