alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಯನ್ನು ವಂಚಿಸಿದ ಫೇಸ್ ಬುಕ್ ಫ್ರೆಂಡ್ ಅರೆಸ್ಟ್

ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಿತಳಾಗಿದ್ದ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ವಂಚಿಸಲೆತ್ನಿಸಿದ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಕರ್ನೂಲಿನ 25 ವರ್ಷದ ನರೇಶ್ ಬಂಧಿತ ಆರೋಪಿಯಾಗಿದ್ದು, ಈತ ಬೆಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಆರು ತಿಂಗಳ ಹಿಂದೆ ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡಿದ್ದ.

ಆಕೆಯೊಂದಿಗೆ ಪ್ರೀತಿಯ ನಾಟಕವಾಡಿದ್ದ ನರೇಶ್ ಬೆಂಗಳೂರಿಗೆ ಬಂದು ಭೇಟಿ ಮಾಡಿದ್ದಲ್ಲದೆ ಮದುವೆಯಾಗುವುದಾಗಿ ನಂಬಿಸಿದ್ದ. ಬಳಿಕ ವಿದ್ಯಾರ್ಥಿನಿಯನ್ನು ಮೈಸೂರು, ವಿಜಯವಾಡ ಸೇರಿದಂತೆ ಹಲವು ಕಡೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಂಡಿದ್ದ.

ಇದಾದ ನಂತರ ವಿದ್ಯಾರ್ಥಿನಿ ತನ್ನನ್ನು ಮದುವೆಯಾಗುವಂತೆ ಕೇಳಿದ ವೇಳೆ ಜಾತಿ ಕಾರಣ ಹೇಳಿ ನಿರಾಕರಿಸಿದ್ದ ನರೇಶ್ ವಿರುದ್ಧ ಯಶವಂತಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಆತನನ್ನು ಬಂಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...