alex Certify
ಕನ್ನಡ ದುನಿಯಾ       Mobile App
       

Kannada Duniya

ನಕಲಿ ನೋಟು ಮುದ್ರಿಸುತ್ತಿದ್ದ ಖದೀಮರು ಅಂದರ್

ವಿಜಯಪುರ: ಮಹತ್ವದ ಕಾರ್ಯಾಚರಣೆ ನಡೆಸಿರುವ ವಿಜಯಪುರ ಡಿ.ಸಿ.ಐ.ಬಿ. ಪೊಲೀಸರು, ನಕಲಿ ನೋಟು ತಯಾರಿಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ.

ಸಿರಾಜ್ ಮುಳ್ಳಿ(27), ಹಾಜಿ ಮಸ್ತಾನ್(23), ಮೆಹಬೂಬ್(23) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 200 ರೂ., 500 ರೂ., 2000 ರೂ. ಮುಖಬೆಲೆಯ 67,200 ರೂ. ನಕಲಿ ನೋಟುಗಳು, ಪ್ರಿಂಟರ್, ಪೇಪರ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ವಿಜಯಪುರ ದರ್ಗಾ ಬಳಿಯ ಮನೆಯಲ್ಲಿ ನಕಲಿ ನೋಟುಗಳನ್ನು ಮುದ್ರಿಸಿಕೊಂಡು ಅವುಗಳನ್ನು ಯಾರಿಗೂ ಅನುಮಾನ ಬಾರದಂತೆ ಚಲಾವಣೆ ಮಾಡುತ್ತಿದ್ದರು.

ಇವರ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...