alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ರೈತರಿಗೆ ವಾರದೊಳಗೆ ಸಿಗಲಿದೆ ಸಿಹಿ ಸುದ್ದಿ

ಮುಖ್ಯಮಂತ್ರಿ ಕುಮಾರಸ್ವಾಮಿಯವರ ನೇತೃತ್ವದ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದ್ದು, ಈ ಕುರಿತ ಆದೇಶ ವಾರದೊಳಗೆ ಹೊರಬೀಳುವ ನಿರೀಕ್ಷೆಯಿದೆ.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ಈ ವಿಚಾರವನ್ನು ತಿಳಿಸಿದ್ದು, ಸಹಕಾರಿ ಸಂಸ್ಥೆಗಳಲ್ಲಿರುವ 1ಲಕ್ಷ ರೂ. ವರೆಗಿನ ರೈತರ ಚಾಲ್ತಿ ಸಾಲ ಮನ್ನಾ ಘೋಷಣೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಆರ್ಥಿಕ ಇಲಾಖೆ ಆದೇಶ ಹೊರಡಿಸಲಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ ಸಾಲ ಮನ್ನಾದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲು ತೀರ್ಮಾನಿಸಿದ್ದು, ಈ ಕುರಿತು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ ಎಂದಿರುವ ಬಂಡೆಪ್ಪ ಕಾಶೆಂಪುರ, ಅರ್ಹ ರೈತರಿಗೆ ಋಣ ಮುಕ್ತ ಪತ್ರ ನೀಡಲಾಗುವುದು ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...