alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ರೈತರಿಗೆ ಕೊನೆಗೂ ಸಿಕ್ತು ‘ಸಿಹಿ ಸುದ್ದಿ’

ಮುಖ್ಯಮಂತ್ರಿ ಕುಮಾರಸ್ವಾಮಿಯವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾವು ನೀಡಿದ ಭರವಸೆಯಂತೆ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡಿದ್ದರು. ಇದೀಗ ರಾಜ್ಯದ ಸಹಕಾರಿ ಸಂಸ್ಥೆಗಳಿಂದ ರೈತರು ಪಡೆದ ಅಲ್ಫಾವಧಿ ಬೆಳೆ ಸಾಲದ ಪೈಕಿ 1 ಲಕ್ಷದವರೆಗಿನ ಸಾಲ ಮನ್ನಾಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ರೈತರಿಗೆ ಅನುಕೂಲ ಮಾಡುವ ಮತ್ತೊಂದು ನಿರ್ಧಾರವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಹೇಳಿದ್ದು, ಸ್ವಾತಂತ್ರ್ಯೋತ್ಸವ ಅಥವಾ ಗಣೇಶನ ಹಬ್ಬದ ಕೊಡುಗೆಯಾಗಿ ಇದನ್ನು ನೀಡುವುದಾಗಿ ತಿಳಿಸಿದ್ದಾರೆ.

ಜೊತೆಗೆ ಮತ್ತೊಂದು ಸಿಹಿ ಸುದ್ದಿಯೊಂದನ್ನು ಸರ್ಕಾರ ನೀಡಿದ್ದು, ಈ ಮೊದಲು ಸಹಕಾರ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಒಂದು ಕುಟುಂಬ ಎಂದು ಉಲ್ಲೇಖಿಸಲಾಗುತ್ತಿತ್ತು. ಈಗ ಆ ನಿಯಮಾವಳಿ ಕೈ ಬಿಡಲಾಗಿದ್ದು, ಒಂದೇ ಕುಟುಂಬದ ಎಷ್ಟೇ ರೈತರು ಸಾಲ ಮಾಡಿದ್ದರೂ ಅದನ್ನು ಮನ್ನಾ ಮಾಡಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...